ಸಿ. ಎಚ್. ಹನುಮಂತರಾಯ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಸಿ. ಎಚ್. ಹನುಮಂತರಾಯ ಇವರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕಬೆಳವಂಗಲದ ರೈತ ಕುಟುಂಬದಲ್ಲಿ ಜನಿಸಿದರು. ಬಿ.ಎ(ಆನರ್ಸ್) ಹಾಗೂ ಎಲ್.ಎಲ್.ಬಿ. ಪದವಿಯನ್ನು ಪಡೆದ ಎವರು ಬೆಂಗಳೂರಿನ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸಹ-ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ವಕೀಲ ವೃತ್ತಿಯಲ್ಲಿ ಹೆಸರುಗಳಿಸಿರುವ ಇವರು ರೈತಪರ ಮತ್ತು ಕನ್ನಡಪರ ಹೋರಾಟಗಾರರ ವಿರುದ್ಧ ಹಾಕಿದ ಪ್ರಕರಣಗಳಲ್ಲಿ ಅವರ ಪರ ವಕಾಲತ್ತು ವಹಿಸಿದ್ದಾರೆ. ನ್ಯಾಯಾಲಯಗಳಲ್ಲಿ ಕನ್ನಡದಲ್ಲೇ ವಾದ ಮಂಡಿಸುವ ಕೌಶಲ್ಯ ಅವರಿಗೆ ಒಲಿದಿದೆ. ಹಲವಾರು ಕಾನೂನು ಕಾಲೇಜುಗಳಲ್ಲಿ ಗೌರವ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರು 'ವಕೀಲರೊಬ್ಬರ ವಗೈರೆಗಳು' ಕೃತಿಗೆ ಕರ್ನಾಟಕ ಸಾಹಿತ್ಯ ಅಕಾಡಮಿ ಪ್ರಶಸ್ತಿ ಲಭಿಸಿದೆ. ರಾಜ್ಯ ಸರ್ಕಾರ ಇವರಿಗೆ ಸುವರ್ಣ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.