ವಿಷಯಕ್ಕೆ ಹೋಗು

ಸೇಬು

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
(ಸೇಬಿನ ಹಣ್ಣು ಇಂದ ಪುನರ್ನಿರ್ದೇಶಿತ)
ಸೇಬು
A typical apple
Scientific classification
ಸಾಮ್ರಾಜ್ಯ:
plantae
(ಶ್ರೇಣಿಯಿಲ್ಲದ್ದು):
(ಶ್ರೇಣಿಯಿಲ್ಲದ್ದು):
Eudicots
(ಶ್ರೇಣಿಯಿಲ್ಲದ್ದು):
ಗಣ:
ಕುಟುಂಬ:
ಕುಲ:
ಪ್ರಜಾತಿ:
M. domestica
Binomial name
ಮಲಸ್ ಡೊಮೆಸ್ಟಿಕಾ
Borkh., 1803
Synonyms

Malus communis Desf.
Malus pumila auct.[]
Pyrus malus L.[]

ಸೇಬು ಗುಲಾಬಿ ಕುಟುಂಬದಲ್ಲಿನ (ರೋಸೇಸೀ) ಜಾತಿಯಾದ ಮೇಲಸ್ ಡೊಮೆಸ್ಟಿಕಾಕ್ಕೆ ಸೇರಿದ ಪೋಮ್ ಲಕ್ಷಣಗಳಿರುವ ಸೇಬಿನ ಮರಹಣ್ಣು. ಅದು ಅತ್ಯಂತ ವ್ಯಾಪಕವಾಗಿ ಬೇಸಾಯಮಾಡಲಾದ ಮರಹಣ್ಣುಗಳ ಪೈಕಿ ಒಂದು, ಮತ್ತು ಮಾನವರಿಂದ ಬಳಸಲಾಗುವ ಮೇಲಸ್ ಪಂಗಡದ ಅನೇಕ ಸದಸ್ಯಗಳ ಪೈಕಿ ಅತ್ಯಂತ ವ್ಯಾಪಕವಾಗಿ ಪರಿಚಿತವಾಗಿರುವ ಸದಸ್ಯವಾಗಿದೆ. ಈ ಮರವು ಮಧ್ಯ ಏಷ್ಯಾದ ಮೂಲದ್ದು, ಮತ್ತು ಇಂದೂ ಕೂಡ ಇದರ ಕಾಡುಪೂರ್ವಜವನ್ನು ಇಲ್ಲಿ ಕಾಣಬಹುದು. ಸೇಬು ಮೂಲತಃ ಸಮಶೀತೋಷ್ಣ ವಲಯದ ಬೆಳೆ. ಕಪ್ಪು ಸಮುದ್ರ ಮತ್ತು ಕ್ಯಾಸ್ಪಿಯನ್ ಸಮುದ್ರ ನಡುವಿನ ಭೂಭಾಗವು ಇದರ ಮೂಲ ಪ್ರದೇಶವೆಂದು ತಿಳಿಯಲಾಗಿದ್ದು,ನಂತರ ಈ ಬೆಳೆ ಸಮಶೀತೋಷ್ಣ ವಲಯದ ಎಲ್ಲ ದೇಶಗಳಿಗೂ ಪ್ರಸರಣ ಹೊಂದಿದೆ. ಭಾರತದಲ್ಲಿ ಸುಮಾರು ೦.೨೮ ದಶ ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಸುಮಾರು ೨.೯ ದಶ ಲಕ್ಷ ಟನ್ ಸೇಬನ್ನು ಉತ್ಪಾದಿಸಲಾಗುತ್ತದೆ. ದೇಶದಲ್ಲಿ ಹಣ್ಣಿನ ಉತ್ಪಾದನೆಗೆ ಒಳ ಪಟ್ಟಿರುವ ಒಟ್ಟು ಕ್ಷೇತ್ರದ ೬.೧ರಷ್ಟು ಪ್ರದೇಶದಲ್ಲಿ ಸೇಬನ್ನು ಬೆಳೆಯಲಾಗುತ್ತದೆ. ಇದರ ಬೆಳವಣಿಗೆಗೆ 4-21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಅತಿ ಸೂಕ್ತ. ಅಲ್ಲದೆ ಸುಮಾರು 100-125 ಸೆ.ಮೀ.ನಷ್ಟು ಮಳೆ ಬೇಕಾಗುತ್ತದೆ.ಮೋಡ ಮುಸುಕಿದ,ಕಡಿಮೆ ಉಷ್ಣಾಂಶದ,ಆರ್ದ್ರ ವಲಯಗಾಲ್ಲಿ ಚೆನ್ನಾಗಿ ಸೇಬು ಬೆಳೆಯುತ್ತದೆ. ಹಂಚಿಕೆ ಮತ್ತು ಉತ್ಪಾದನೆ: ಭಾರತದಲ್ಲಿ ಸೇಬಿನ ಬೇಸಾಯವು ಕೆಲವೇ ಪ್ರದೇಶದಲ್ಲಿ ಕೇಂದ್ರೀಕೃತವಾಗಿದೆ. ಜಮ್ಮು ಮತ್ತು ಕಾಶ್ಮೀರ,ಹಿಮಾಚಲ ಪ್ರದೇಶ,ಉತ್ತರಾಖಂಡ,ಪಂಜಾಬ್,ಅರುಣಾಚಲ ಪ್ರದೇಶ,ನಾಗಾಲ್ಯಾಂಡ್,ಮೇಘಾಲಯ ಮತ್ತು ಮಣಿಪುರಗಳಲ್ಲಿ ಸೇಬಿನ ಬೇಸಾಯವು ಹಂಚಿಕೆಯಾಗಿದೆ. ದಕ್ಷಿಣ ಭಾರತದಲ್ಲಿ ತಮಿಳುನಾಡಿನ ನೀಲಗಿರಿ ಬೆಟ್ಟಗಳಲ್ಲಿ ಮಾತ್ರ ಸೇಬನ್ನು ಬೆಳೆಯಲಾಗುತ್ತದೆ. ಇತ್ತೀಚಿನ ವರ್ಷಗಳಲ್ಲಿ ಈಶಾನ್ಯದ ಎಲ್ಲ ರಾಜ್ಯಗಳು ಹಾಗೂ ಕೇಂದ್ರ ಉನ್ನತ ಪ್ರದೇಶದಲ್ಲಿ ಸೇಬಿನ ಬೇಸಾಯವನ್ನು ಅಭಿವೃದ್ಧಿಪಡಿಸಲಾಗಿದೆ.

ಉಲ್ಲೇಖಗಳು

[ಬದಲಾಯಿಸಿ]
  1. "Malus pumila auct". Germplasm Resources Information Network (GRIN). Agricultural Research Service (ARS), United States Department of Agriculture (USDA). Retrieved 2012-01-04.
  2. "Pyrus malus L." Germplasm Resources Information Network (GRIN). Agricultural Research Service (ARS), United States Department of Agriculture (USDA). Retrieved 2012-01-29.

ಬಾಹ್ಯ ಸಂಪರ್ಕಗಳು

[ಬದಲಾಯಿಸಿ]
"https://kn.wikipedia.org/w/index.php?title=ಸೇಬು&oldid=1180821" ಇಂದ ಪಡೆಯಲ್ಪಟ್ಟಿದೆ