ವಿಷಯಕ್ಕೆ ಹೋಗು

ಹಂಗರಗಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ಹಂಗರಗಿ
ಹೊಳೆ ಹಂಗರಗಿ
village

ಹೊಳೆ ಹಂಗರಗಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನಲ್ಲಿದೆ.

ಭೌಗೋಳಿಕ

[ಬದಲಾಯಿಸಿ]

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಜನಸಂಖ್ಯೆ

[ಬದಲಾಯಿಸಿ]

ಗ್ರಾಮದಲ್ಲಿ ಜನಸಂಖ್ಯೆ ಸುಮಾರು 2500 ಇದೆ. ಅದರಲ್ಲಿ 1300 ಪುರುಷರು ಮತ್ತು 1200 ಮಹಿಳೆಯರು ಇದ್ದಾರೆ.

ಹವಾಮಾನ

[ಬದಲಾಯಿಸಿ]

ಬೇಸಿಗೆಕಾಲ - ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨°C ವರೆಗೆ(ಎಪ್ರೀಲನಲ್ಲಿ), ಅತೀ ಕಡಿಮೆ ಅಂದರೆ ೯°C ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.

  • ಬೇಸಿಗೆಕಾಲ - ೩೫°C - ೪೨°C
  • ಮಳೆಗಾಲ - ೧೮°C - ೩೨°C
  • ಚಳಿಗಾಲ - ೧೫°C - ೨೮°C
  • ಮಳೆ - ಪ್ರತಿ ವರ್ಷ ೩೦೦ - ೬೦೦ ಮಿಮಿ ಗಳಸ್ಟು ಆಗಿತ್ತದೆ

ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ, ಸೇಂಗಾ ಚಟ್ನಿ, ಎಣ್ಣಿ ಬದನೆಯಕಾಯಿ ಪಲ್ಯ, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಸಂಸ್ಕೃತಿ

[ಬದಲಾಯಿಸಿ]
ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ಗಾಂಧಿ ಟೋಪಿ ಅಥವಾ ಬಿಳಿ/ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ. ಮಹಿಳೆಯರು ಇಲಕಲ್ಲ ಸೀರೆಯನ್ನು ಧರಿಸುತ್ತಾರೆ.

ಲಾವಣಿ ಪದ, ಡೊಳ್ಳಿನ ಪದ, ಗೀಗೀ ಪದ, ಜಾನಪದ, ಡೊಳ್ಳು ಕುಣಿತ, ಕರಡಿ ಮಜಲು, ಮೊಹರಮ ಹೆಜ್ಜೆ ಕುಣಿತ ಮತ್ತು ಶಿವ ಭಜನೆ ಇತ್ಯಾದಿ ಗ್ರಾಮದ ಕಲೆಯಾಗಿದೆ.

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ.

ದೇವಸ್ಥಾನಗಳು

[ಬದಲಾಯಿಸಿ]
  • ಶ್ರೀ ಕಲ್ಮೇಶ್ವರ ದೇವಾಲಯ
  • ಶ್ರೀ ಮಹಾಲಕ್ಷ್ಮಿ ದೇವಾಲಯ
  • ಶ್ರೀ ದುರ್ಗಾದೇವಿ ದೇವಾಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ಹನುಮಾನ ದೇವಾಲಯ

ಮಸೀದಿ

[ಬದಲಾಯಿಸಿ]

ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮಸೀದಿ ಇದೆ.

ಪ್ರತಿವರ್ಷ ಅತಿ ವಿಜೃಂಭಣೆಯಿಂದ ಮಕರ ಸಂಕ್ರಾಂತಿಯ ದಿನ ಶ್ರೀ ಕಲ್ಮೇಶ್ವರ ಜಾತ್ರಾ ಮಹೋತ್ಸವ, ಬಸವ ಜಯಂತಿ, ಕಾರ ಹುಣ್ಣುಮೆ, ಶ್ರೀಶೈಲ ಮಲ್ಲಿಕಾರ್ಜುನ ಪಾದಯಾತ್ರೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಗ್ರಾಮದ ಪ್ರಮುಖ ಉದ್ಯೋಗವೇ ಕೃಷಿ ಮತ್ತು ತೋಟಗಾರಿಕೆಯಾಗಿದೆ. ಈ ಕ್ಷೇತ್ರದಲ್ಲಿ ಸುಮಾರು 75% ಜನರು ಕೆಲಸ ಮಾಡುತ್ತಾರೆ.

ನೀರಾವರಿ

[ಬದಲಾಯಿಸಿ]

ಗ್ರಾಮದಲ್ಲಿ ಬಹುಭಾಗ ಭೂಮಿ ನದಿ ಮೂಲಕ ನೀರಾವರಿ ಮಾಡುತ್ತಾರೆ ಹಾಗೂ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು, ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ(ಈರುಳ್ಳಿ), ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ, ದ್ರಾಕ್ಷಿ, ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಉದ್ಯೋಗ

[ಬದಲಾಯಿಸಿ]

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ಆಡು(ಮೇಕೆ) ಸಾಕಾಣಿಕೆ ಮತ್ತು ಕುರಿ ಸಾಕಾಣಿಕೆ ಉಪಕಸುಬುಗಳಾಗಿವೆ.

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರೆಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಆಲದ ಮರ, ಬೇವಿನ ಮರ, ಜಾಲಿ ಮರ, ಮಾವಿನ ಮರ ಮತ್ತು ಅರಳಿ ಮರ ಇತ್ಯಾದಿ.

ಪ್ರಾಣಿ

[ಬದಲಾಯಿಸಿ]

ತೋಳ, ನರಿ, ಹಾವು, ಮೊಲ, ನವಿಲು, ಬೆಳ್ಳಕ್ಕಿ, ಗುಬ್ಬಿ, ಕಾಗೆ ಮತ್ತು ಕೋಗಿಲೆ ಇತ್ಯಾದಿ.

ಆರ್ಥಿಕತೆ

[ಬದಲಾಯಿಸಿ]

ಗ್ರಾಮದ ಆರ್ಥಿಕ ಪರಿಸ್ಥಿತಿ ಮಧ್ಯಮ ತರಗತಿಯಲ್ಲಿದೆ.

ಶಿಕ್ಷಣ

[ಬದಲಾಯಿಸಿ]

ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಒಂದು ಖಾಸಗಿ ಶಾಲೆ ಇದೆ. ಗ್ರಾಮದ ಅನೇಕ ಯುವಕರು ಭಾರತೀಯ ಸೇನೆ, ರಾಜ್ಯ ಪೋಲಿಸ್ ಇಲಾಖೆ ಮತ್ತು ಇತರೆ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ.

ಸಾಕ್ಷರತೆ

[ಬದಲಾಯಿಸಿ]

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೭೫%. ಅದರಲ್ಲಿ ೮೫% ಪುರುಷರು ಹಾಗೂ ೬೮% ಮಹಿಳೆಯರು ಸಾಕ್ಷರತೆ ಹೊಂದಿದೆ.

ರಾಜಕೀಯ

[ಬದಲಾಯಿಸಿ]

ಗ್ರಾಮವು ವಿಜಯಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

"https://kn.wikipedia.org/w/index.php?title=ಹಂಗರಗಿ&oldid=1312983" ಇಂದ ಪಡೆಯಲ್ಪಟ್ಟಿದೆ