ಹೊಸೂರ(ಹೆಚ್)
ಹೊಸೂರ(ಹೆಚ್)
ಹೊಸೂರ(ಹೆಚ್) | |
---|---|
village | |
Population (೨೦೧೨) | |
• Total | ೧೫೦೦ |
ಹೊಸೂರ(ಹೆಚ್) ಒಂದು ಚಿಕ್ಕ ಹಳ್ಳಿ ಹಾಗೂ ಪುಣ್ಯಕ್ಷೇತ್ರ.ಇದು ಕರ್ನಾಟಕ ರಾಜ್ಯದ ಬಿಜಾಪೂರ ಜಿಲ್ಲೆಯ ಬಿಜಾಪೂರ ತಾಲ್ಲೂಕಿನಲ್ಲಿದೆ. ಹೊಸೂರ(ಹೆಚ್) ಗ್ರಾಮವು ಬಬಲೇಶ್ವರ - ಯರಗಟ್ಟಿ ರಾಜ್ಯ ಹೆದ್ದಾರಿಯಲ್ಲಿ ಇದೆ. ಜಿಲ್ಲಾ ಕೇಂದ್ರ ವಿಜಾಪೂರದಿಂದ ಸುಮಾರು ೬೦ ಕಿ. ಮಿ. ದೂರ ಇದೆ.
ದೇವಾಲಯಗಳು
[ಬದಲಾಯಿಸಿ]ಶ್ರೀ ದುರ್ಗಾದೇವಿ ದೇವಾಲಯ, ಶ್ರೀ ಮಹಾಲಕ್ಷ್ಮಿ ದೇವಸ್ಥಾನ ಮತ್ತು ಶ್ರೀ ಹಣಮಂತ ದೇವಾಲಯಗಳನ್ನು ನಿರ್ಮಿಸಿದ್ದಾರೆ.
ಮಸೀದಿಗಳು
[ಬದಲಾಯಿಸಿ]ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.
ನೀರಾವರಿ
[ಬದಲಾಯಿಸಿ]ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.
ಹಬ್ಬಗಳು
[ಬದಲಾಯಿಸಿ]ಪ್ರತಿವರ್ಷ ಶ್ರೀ ದುರ್ಗಾದೇವಿ ಜಾತ್ರಾ ಮಹೋತ್ಸವ, ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.
ಶಿಕ್ಷಣ
[ಬದಲಾಯಿಸಿ]ಗ್ರಾಮದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೆ. ಶಾಲೆಯು ೧೯೫೫ರಲ್ಲಿ ಪ್ರಾರಂಭವಾಗಿ ೧ನೇ ತರಗತಿಯಿಂದ ೮ನೇ ತರಗತಿವರೆಗೆ ೨೦೦ರಕ್ಕೂ ಹೆಚ್ಚು ವಿದ್ಯಾರ್ಥಿಗಳ್ಳಿದ್ದಾರೆ.
ರಾಜಕೀಯ
[ಬದಲಾಯಿಸಿ]ಬಬಲೇಶ್ವರ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.
ಕೈಗಾರಿಕೆಗಳು
[ಬದಲಾಯಿಸಿ]ಗ್ರಾಮದ ಹತ್ತಿರ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಇದೆ.
- Pages with non-numeric formatnum arguments
- Orphaned articles from ಡಿಸೆಂಬರ್ ೨೦೧೫
- All orphaned articles
- Short description with empty Wikidata description
- Pages using infobox settlement with unknown parameters
- Pages using infobox settlement with missing country
- Pages using infobox settlement with no map
- Pages using infobox settlement with no coordinates
- ಬಿಜಾಪುರ ಜಿಲ್ಲೆ