ಸದಸ್ಯ:Nikithamadappac
ಕುವೆಂಪು - ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ - ನವೆಂಬರ್ ೧೧, ೧೯೯೪) - ಕನ್ನಡವು ಪಡೆದ ಅತ್ಯುತ್ತಮ ಕವಿ, ಎರಡನೆ ರಾಷ್ಟ್ರಕವಿ. ಜ್ಞಾನಪೀಠ ಪ್ರಶಸ್ತಿಯನ್ನು ಪಡೆದ ಕನ್ನಡದಪ್ರ ಪ್ರಥಮ ವ್ಯಕ್ತಿ. 'ವಿಶ್ವ ಮಾನವ' ಪರಿಕಲ್ಪನೆಯನ್ನೂ ಸಾಹಿತ್ಯದ ಮೂಲಕ ಸಮಾಜಕ್ಕೆ ತಲುಪಿಸಿದವರು. ಕನ್ನಡ ಸಾಹಿತ್ಯಕ್ಕೆ ಇವರ ಕಾಣಿಕೆ ಅಪಾರ. ಕುವೆಂಪುರವರ ಮೊದಲ ಕಾವ್ಯನಾಮ-"ಕಿಶೋರ ಚಂದ್ರವಾಣಿ" -ನಂತರ ಅವರು ಕುವೆಂಪು ಕಾವ್ಯನಾಮ ಬಳಸಿ ಬರೆಯತೊಡಗಿದರು. ಡಿಸೆಂಬರ್ ೨೯, ೧೯೦೪, ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹಿರೇಕೊಡಿಗೆಯಲ್ಲಿ ಜನಿಸಿದ ಇವರು, ಕುಪ್ಪಳಿ (ಶಿವಮೊಗ್ಗ ಜಿಲ್ಲೆ, ತೀರ್ಥಹಳ್ಳಿ ತಾಲ್ಲೂಕು) ಹಾಗೂ ಮೈಸೂರಿನಲ್ಲಿ ಪರಪುಟ್ಟ ಹಕ್ಕಿಯಂತೆ ಬೆಳೆದರು. ಮೈಸೂರಿನ 'ಮಹಾರಾಜಾ' ಕಾಲೇಜಿನಲ್ಲಿ ಓದಿದ ಇವರು, ಮೈಸೂರು ವಿಶ್ವವಿದ್ಯಾಲಯದಲ್ಲಿ ಸೇವೆ ಸಲ್ಲಿಸಿ ಉಪ ಕುಲಪತಿಯಾಗಿ ನಿವೃತ್ತರಾದರು. ಇವರು ಮೈಸೂರಿನ ಒಂಟಿಕೊಪ್ಪಲಿನಲ್ಲಿರುವ "ಉದಯರವಿ"ಯಲ್ಲಿ ವಾಸಿಸುತ್ತಿದ್ದರು. ಇವರ ಹೆಂಡತಿಯ ಹೆಸರು ಹೇಮಾವತಿ ಮತ್ತು ಇವರಿಗೆ ನಾಲ್ಕು ಜನ ಮಕ್ಕಳು(ಪೂರ್ಣಚಂದ್ರ ತೇಜಸ್ವಿ, ಕೋಕಿಲೋದಯ ಚೈತ್ರ, ಇಂದುಕಲಾ, ತಾರಿಣಿ ಚಿದಾನಂದ).
ಮಾಸ್ತಿ ವೆಂಕಟೇಶ ಅಯ್ಯಂಗಾರರು (ಜೂನ್ ೬ ೧೮೯೧-ಜೂನ್ ೬ ೧೯೮೬)-ಕನ್ನಡದ ಒಬ್ಬ ಅಪ್ರತಿಮ ಲೇಖಕರು. ಕನ್ನಡ ಸಾಹಿತ್ಯ ಲೋಕದಲ್ಲಿ ಮಾಸ್ತಿ ಎಂದೇ ಖ್ಯಾತರಾಗಿರುವ ಈ ಸಾಹಿತಿ ಶ್ರೀನಿವಾಸ ಎಂಬ ಕಾವ್ಯನಾಮದಡಿಯಲ್ಲಿ ಬರೆಯುತ್ತಿದರು. ಮಾಸ್ತಿ ವೆಂಕಟೇಶ ಅಯ್ಯಂಗಾರರು ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನ ಮಾಸ್ತಿ ಗ್ರಾಮದಲ್ಲಿ ಜೂನ್ ೬ ೧೮೯೧ ರಲ್ಲಿ ಜನಿಸಿದರು. ಮೆಟ್ರಿಕ್ಯುಲೇಷನ್(೧೯೦೭), ಎಫ್.ಎ (೧೯೦೯), ಬಿ.ಎ (ಮದರಾಸು ವಿಶ್ವವಿದ್ಯಾಲಯ ೧೯೧೨), ಮೈಸೂರು ಸಿವಿಲ್ ಸರ್ವಿಸ್ (೧೯೧೩), ಎಂ.ಎ (ಮದರಾಸು ವಿಶ್ವವಿದ್ಯಾಲಯ ೧೯೧೪) ಪರೀಕ್ಷೆಗಳಲ್ಲಿ ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗಿ, ೧೯೧೪ ರಲ್ಲಿ ಮೈಸೂರು ಸರ್ಕಾರದಲ್ಲಿ ಅಸಿಸ್ಟೆಂಟ್ ಕಮಿಷನರಾಗಿ ತಮ್ಮ ವೃತ್ತಿ ಜೀವನವನ್ನು ಆರಂಭಿಸಿದರು. ೧೯೧೪ ರಿಂದ ೧೯೪೩ ರವರೆಗೆ ವಿವಿಧ ಉನ್ನತ ಹುದ್ದೆಗಳನ್ನು ಅಲಂಕರಿಸಿ ನಿವೃತ್ತರಾದರು. ೧೯೨೦ ರಲ್ಲಿ ಅವರ ಮೊದಲ ಪುಸ್ತಕ ಕೆಲವು ಸಣ್ಣ ಕಥೆಗಳು ಪ್ರಕಟಗೊಂಡಿತು. ಸಣ್ಣಕತೆ, ನೀಳ್ಗತೆ, ಕಾದಂಬರಿ, ಕಾವ್ಯ, ನಾಟಕ, ಜೀವನ ಚರಿತ್ರೆ, ಪ್ರಬಂಧ, ವಿಮರ್ಶೆ, ಸಂಪಾದನೆ, ಅನುವಾದ - ಹೀಗೆ ಕನ್ನಡ ಸಾಹಿತ್ಯದ ಪ್ರತಿಯೊಂದು ಕ್ಷೇತ್ರಕ್ಕೂ ತಮ್ಮ ಕೊಡುಗೆಯನ್ನು ನೀಡಿದ್ದಾರೆ.
೧೯೮೩ ರಲ್ಲಿ ಚಿಕವೀರ ರಾಜೇಂದ್ರ ಕಾದಂಬರಿಗಾಗಿ ಜ್ಞಾನಪೀಠ ಪ್ರಶಸ್ತಿಯಿಂದ ಪುರಸ್ಕೃತಗೊಂಡ ಮಾಸ್ತಿಯವರು ಕನ್ನಡಕ್ಕೆ ನಾಲ್ಕನೆ ಜ್ಞಾನಪೀಠ ಪ್ರಶಸ್ತಿಯನ್ನು ತಂದು ಕೊಟ್ಟರು. ಜೀವನ ಪರ್ಯಂತ ಕನ್ನಡ ಸೇವೆಯನ್ನು ಮಾಡಿದ ಮಾಸ್ತಿಯವರು ಜೂನ್ ೬ ೧೯೮೬ ರಂದು ನಿಧನ ಹೊಂದಿದರು.