ಕಾಲಕಣ್ಣಿಯ ಕಾಮವ್ವ
ಗೋಚರ
ಕಾಲಕಣ್ಣಿ ಕಾಮವ್ವ | |
---|---|
ಜನನ | ೧೧೬೦ |
ಅಂಕಿತನಾಮ | ನಿರ್ಭೀತಿ ನಿಜಲಿಂಗ |
ಕಾಲಕಣ್ಣಿ ಕಾಮವ್ವ
[ಬದಲಾಯಿಸಿ]ಈಕೆಯ ವೈಯಕ್ತಿಕ ಪೂರ್ವಪರಗಳೊಂದೂ ತಿಳಿದು ಬರುವುದಿಲ್ಲ. "ಕಾಲಕಣ್ಣಿ" ಎಂಬುದು ಸ್ಥಳನಾಮ ವಿಶೇಷಣವೂ, ಕಾಯಕ ಸೂಚಕವೂ ಸ್ಪಷ್ಟವಾಗಿಲ್ಲ. ಆದರೆ ಈಕೆಯ ಕೆಲವು ವಚನಗಳಲ್ಲಿ ಕರಣೇಂದ್ರಿಯಗಳನ್ನು ಲಿಂಗದಲ್ಲಿ ಕಟ್ಟುವ ನಿಷ್ಠೆ, ಗುರು-ಲಿಂಗ-ಜಂಗಮರ ಕಾಲ ಕಟ್ಟುವ ಶ್ರದ್ಧೆ, ಹೆಣ್ಣು-ಗಂಡೆಂಬ ಭೇಧವಿಲ್ಲದೆ ತನು ಮನಗಳ ಪಾವಿತ್ರತೆಯನ್ನು ಎತ್ತಿ ಹಿಡಿಯುವ ಪ್ರಾಮಾಣಿಕತೆ, ಡಾಂಬಿಕ ಭಕ್ತರ ಬಗೆಗಿರುವ ರೊಚ್ಚು ದಂಗು ಬಡಿಸುತ್ತದೆ. ಈಕೆಯ ವಚನಗಳ ಅಂಕಿತ "ನಿರ್ಭೀತಿ ನಿಜಲಿಂಗ". ಈಕೆಯೊಬ್ಬಳು ಗೌಪ್ಯ ವಚನಕಾರ್ತಿಯಾಗಿದ್ದಳು ಎಂದು ನಂಬಲಾಗಿದೆ.[೧]
ಎನ್ನ ಕರಣಂಗಳ ಲಿಂಗದಲ್ಲಿ ಕಟ್ಟುವೆ
ಗುರು ಲಿಂಗ ಜಂಗಮರ ಕಾಲ ಕಟ್ಟುವೆ
ವ್ರತಭ್ರಷ್ಟರ ನಿಟ್ಟೊರಸುವೆ
ಸುಟ್ಟು ತುರತುರನೆ ತೂರುವೆ
ನಿರ್ಭೀತಿ ನಿಜಲಿಂಗದಲ್ಲಿ!
- ↑ http://www.prajavani.net/news/article/2015/05/25/323770.html[ಶಾಶ್ವತವಾಗಿ ಮಡಿದ ಕೊಂಡಿ]