ತುಳಸಿ ಗೌಡ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
ತುಳಸಿ ಗೌಡ ಅವರು ಪದ್ಮಶ್ರೀ ಪ್ರಶಸ್ತಿಯನ್ನು ಸ್ವೀಕರಿಸುತ್ತಿರುವುದು

ಹಾಲಕ್ಕಿ ಸಮುದಾಯಜಾನಪದ ಕಲಾವಿದೆ, ಪದ್ಮಶ್ರೀ ಸುಕ್ರಿ ಬೊಮ್ಮು ಗೌಡ ಅವರ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ತನ್ನದೇ ವಿಶಿಷ್ಠ ಸಾಧನೆಯ ಮೂಲಕ ಗಮನ ಸೆಳೆಯುತ್ತಿರುವ ಮತ್ತೋರ್ವ ಮಹಿಳಾ ಸಾಧಕಿ ತುಳಸಿ ಗೌಡ. ಪರಿಸರ ಪ್ರೇಮಿ. ಅಂಕೋಲಾ ತಾಲೂಕಿನ ಹೊನ್ನಳ್ಳಿ ಗ್ರಾಮದ ತುಳಸಿ ಗೌಡರ ಸಾಧನೆ ಅಪಾರ. ವೃಕ್ಷಮಾತೆ ಎಂದೆನಿಸಿಕೊಂಡಿರುವ ಈಕೆ ಬೆಳೆಸಿದ ಮರಗಳು ಒಂದಲ್ಲಾ, ಎರಡಲ್ಲಾ.. ಲಕ್ಷಗಟ್ಟಲೇ! ಇವ್ರ್ಡಿ ಕಟ್ಟಿಗೆ ಸಂಗ್ರಹಿಸಿ ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು.ಮತ್ತಿಘಟ್ಟ ಅರಣ್ಯ ನರ್ಸರಿಯಲ್ಲಿ ಸೇವೆ ಮಾಡಿ ನಿವೃತ್ತರಾದರೂ ಈಗಲೂ ಅಲ್ಲಿಗೆ ಹೋಗಿ ಯುವಕರಿಗೆ ತರಬೇತಿ, ಮಾರ್ಗದರ್ಶನ ನೀಡುತ್ತಾರೆ.

ತುಳಸಿ ಕಳೆದ ಆರು ದಶಕಗಳಿಂದ ಈ ಕೆಲಸವನ್ನು ಯಾವುದೇ ಪ್ರತಿಫಲ ನಿರೀಕ್ಷೆ ಇಲ್ಲದೆ ಮಾಡುತ್ತಿದ್ದಾರೆ. ಸ್ಥಳೀಯರು ಹೇಳುವಂತೆ ತುಳಸಿ ಅವರು, ಅರಣ್ಯ ಇಲಾಖೆ ನಡೆಸಿದ ಅರಣ್ಯೀಕರಣ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದರು. ಅವರ ಸೇವೆಯನ್ನು ಗುರುತಿಸಿ, ಇಲಾಖೆ ಅವರ ಸೇವೆಯನ್ನು ಕ್ರಮಬದ್ಧಗೊಳಿಸಿತ್ತು.  14 ವರ್ಷಗಳ ನಂತರ, ಅವರು ಸೇವೆಯಿಂದ ನಿವೃತ್ತರಾದರು. ಪಿಂಚಣಿ ಅವರ ಜೀವನೋಪಾಯದ ಏಕೈಕ ಮೂಲವಾ ಗಿದ್ದು

ತುಳಸಿ ಅವರು ಜನಿಸಿದ್ದು ಬಡತನದಿಂದ ಬಳಲುತ್ತಿದ್ದ ಹಾಲಕ್ಕಿ ಬುಡಕಟ್ಟು ಕುಟುಂಬದಲ್ಲಿ. ಅವರು  ಕೇವಲ ಎರಡು ವರ್ಷದಲ್ಲಿದ್ದಾಗ ಅವರ ತಂದೆಯ ಸಾವು ಅವರನ್ನು ತೀವ್ರವಾಗಿ ಬಾಧಿಸಿದೆ. ಬಳಿಕ ಅವರಿಗೆ ಯಾವುದೇ ಔಪಚಾರಿಕ ಶಿಕ್ಷಣ ಸಿಗಲಿಲ್ಲ. ಬಡತನವು ಬಾಲ್ಯದಿಂದಲೂ ದೈನಂದಿನ ಕೂಲಿ ಕಾರ್ಮಿಕರಾದ ತನ್ನ ತಾಯಿಯೊಂದಿಗೆ ಕೆಲಸ ಮಾಡಲು ಪ್ರೇರೇಪಿಸಿತು. ತುಳಸಿ ಚಿಕ್ಕ ವಯಸ್ಸಿನಲ್ಲಿಯೇ ಗೋವಿಂದ ಗೌಡ ಅವರನ್ನು ವಿವಾಹವಾದರು. ಆದರೆ ಅವರು ಕೆಲವೇ ವರ್ಷಗಳಲ್ಲಿ ನಿಧನರಾದರು. ಎಲ್ಲ ದುರ್ಘಟನೆಗಳನ್ನು ಧೈರ್ಯದಿಂದ ಎದುರಿಸಿ ಇಡೀ ರಾಷ್ಟ್ರಕ್ಕೆ ಮಾದರಿಯಾಗಿರುವ ಜೀವನವನ್ನು ನಡೆಸಿದ್ದಾರೆ.

ಹುಟ್ಟು,ಬಾಲ್ಯ[ಬದಲಾಯಿಸಿ]

ಇವರು ಎಲ್ಲರಂತಲ್ಲ, ವಿಶಿಷ್ಟ ವ್ಯಕ್ತಿ ಮತ್ತು ವ್ಯಕ್ತಿತ್ವ. ಇವರ ದಿನನಿತ್ಯದ ಬದುಕು ಆರಂಭವಾಗುವುದೇ ಕೈಯಲ್ಲೊಂದು ಮಡಕೆ ಹಿಡಿದುಕೊಂಡು ಬರಿಗಾಲಿನಲ್ಲಿ ಮನೆಯಿಂದ ಹೊರಡುವ ಮೂಲಕ. ಅಲ್ಲಿಂದ ನೇರವಾಗಿ ನೀರು ಇರುವ ಜಾಗಕ್ಕೆ ಹೋಗುತ್ತಾರೆ. ಅಲ್ಲಿ ಮಡಕೆಗೆ ಮಣ್ಣು, ನೀರು ಸೇರಿಸಿ ಗಿಡ ನೆಡುತ್ತಾರೆ ಇವರಿಗೆ ಬಾಲ್ಯಾ ದಲ್ಲೆ ವಿವಾಹವಾಗಿತ್ತು ಅವರು 17ನೇ ವಯಸ್ಸನಲ್ಲಿದ್ದಾಗ ಲೇವರ ಪತಿ ಗೋವಿಂದ ಗೌಡ ತೀರಿಕೊಂಡರು.

ಹೊನ್ನಳ್ಳಿ ಗ್ರಾಮದ ನಾರಾಯಣ ಹಾಗೂ ನೀಲಿ ದಂಪತಿಗೆ 1944 ರಲ್ಲಿ ಜನಿಸಿದವರು ತುಳಸಿ ಗೌಡರು. ಬಡತನದ ಜತೆಗೆ ತನ್ನ ಎರಡನೇ ವಯಸ್ಸಿನಲ್ಲಿಯೇ ತಂದೆಯನ್ನು ಕಳೆದುಕೊಂಡು, ಶಾಲೆ ಮೆಟ್ಟಿಲನ್ನು ಏರದೆ ತಾಯಿಯ ಜೊತೆ ಕೂಲಿ ಕೆಲಸಕ್ಕೆ ತೆರಳಲು ಪ್ರಾರಂಭಿಸಿದ್ದರು. ಗೋವಿಂದೇ ಗೌಡ ಎನ್ನುವವರ ಜತೆ ಬಾಲ್ಯ ವಿವಾಹವಾದ ತುಳಸಿ ಗೌಡರು, ಚಿಕ್ಕವಯಸ್ಸಿನಲ್ಲಿಯೇ ಗಂಡನನ್ನೂ ಕಳೆದುಕೊಂಡು ವಿಧವೆಯಾದರು.[೧]

ಪರಿಸರ ಪ್ರೇಮಿ[ಬದಲಾಯಿಸಿ]

ಪರಿಸರ ಪ್ರೇಮ ಅನ್ನುವುದು ಈಕೆಗೆ ಹುಟ್ಟಿನಿಂದ ಬಂದಿತ್ತು. ಊರಿನವರ ಜೊತೆ ಕಟ್ಟಿಗೆ ತರುವ ಕೆಲಸವನ್ನ ಮಾಡಿ ಪ್ರತಿನಿತ್ಯ ಐದರಿಂದ ಆರು ರೂಪಾಯಿ ದುಡಿಯುತ್ತಿದ್ದ ತುಳಸಿಗೆ ಅರಣ್ಯ ಇಲಾಖೆ ಬೀಜಗಳನ್ನು ಶೇಖರಣೆ ಮಾಡಿ ಸಸಿಗಳನ್ನಾಗಿ ಮಾಡಿಕೊಡುವ ಕೆಲಸವನ್ನು ಮಾಡುತಿದ್ದರು. ಪರಿಸರದ ಮೇಲೆ ಕಾಳಜಿ ಇದ್ದುದರಿಂದ ಬೀಜಗಳನ್ನು ತಂದು ಸಸಿ ಮಾಡುವ ಕೆಲಸ ಪ್ರಾರಂಭಿಸಿದರು ತುಳಸಿ ಗೌಡ. ಕೇವಲ 1.25 ಪೈಸೆ ದಿನದ ಕೂಲಿಗೆ ಈ ಕೆಲಸವನ್ನ ಮಾಡುತ್ತಿದ್ದ ತುಳಸಿ ಗೌಡರಿಗೆ, ಕಡಿಮೆ ಕೂಲಿಗೆ ಸಸಿ ಮಾಡುವ ಕೆಲಸ ಬೇಡ ಎಂದು ಎಲ್ಲರೂ ಹೇಳಿದರು. ಆದರೆ ಪರಿಸರ ಕಾಳಜಿಯಿಂದ ಅವರು ಕೆಲಸವನ್ನು ಮಾತ್ರ ನಿಲ್ಲಿಸಲಿಲ್ಲ.

, ಎಳ್ಳು, ನಂದಿ, ಪೀಪುಲ್, ಫಿಕಸ್, ಬಿದಿರು, ರಾಟನ್, ಜಮುನ್, ಗೋಡಂಬಿ, ಜಾಯಿಕಾಯಿ, ಮಾವು, ಹಲಸು, ಕೊಕುಮ್‌ನಂತಹ ಹಣ್ಣಿನ ಮರಗಳನ್ನು ಬೆಳೆಸಿದ್ದೇವೆ  ಎಂದು ತುಳಸಿ ಗೌಡ ಹೇಳುತ್ತಾರೆ. ಇವರ ಕೆಲಸದ ಬಗ್ಗೆ ಪುತ್ರ ಸುಬ್ಬರಾಯ ಗೌಡ ಹೆಮ್ಮೆಯಿಂದ ಮಾತನಾಡುತ್ತಾರೆ. ಗ್ರಾಮಸ್ಥರಿಗೆ, ಸುತ್ತಮುತ್ತಲಿನ ಜನರಿಗೆ ತುಳಸಜ್ಜಿ ಎಂದೇ ಜನಪ್ರಿಯ. ಇಂದಿನ ಯುವಜನಾಂಗದವರು ಅವರ ಬಳಿ ಹೋಗಿ ಗಿಡ, ಬಳ್ಳಿ, ಬೀಜಗಳ ಬಗ್ಗೆ ಮಾಹಿತಿ ಪಡೆಯುತ್ತಾರೆ, ಹೇಗೆ ನೆಟ್ಟು ಬೆಳೆಸಬೇಕೆಂದು ಸಲಹೆ ಪಡೆಯುತ್ತಾರೆ. ಜನರು ಪ್ರೀತಿಯಿಂದ 'ವೃಕ್ಷ ದೇವಿ' ಎಂದು ಕರೆಯುತ್ತಾರೆ.

ಉದ್ಯೋಗ[ಬದಲಾಯಿಸಿ]

ಪರಿಸರದ ಮೇಲಿನ ಈಕೆಯ ಪ್ರೀತಿಯನ್ನ ಕಂಡು ಅಂದಿನ ಅರಣ್ಯಾಧಿಕಾರಿಯಾಗಿದ್ದ ಅ.ನಾ ಯಲ್ಲಪ್ಪ ರೆಡ್ಡಿ ಈಕೆಗೆ ಮಾಸ್ತಿಕಟ್ಟೆ ಅರಣ್ಯ ವಲಯದಲ್ಲಿ ಸಸಿಗಳನ್ನು ಪೋಷಿಸುವ ಕೆಲಸವನ್ನು ಸಹ ಕೊಡಿಸಿದ್ದರು. 72 ವರ್ಷದ ತುಳಸಿ ಗೌಡ ಅವರು ಕಳೆದ 57 ವರ್ಷಗಳಿಂದ ಅರಣ್ಯ ಇಲಾಖೆಯಲ್ಲಿ ದಿನಗೂಲಿ ನೌಕರಿ ಮಾಡಿಕೊಂಡಿದ್ದಾರೆ

ಗಿ ಡ ಅವರಿಗೆ ಹಿಂದಿನಿಂದಲೂ ಇಷ್ಟವಿದ್ದ ಕಾರಣ ಅವರು ಕೆಲಸ ಬಿಡಲಿಲ್ಲ. ಕಾಡೆಲ್ಲಾ ಸುತ್ತಿ ಅಪರೂಪದ ಬೀಜ, ಗಿಡಗಳನ್ನು ಸಂಗ್ರಹಿಸುತ್ತಿದ್ದರು. ನಂತರ ಅದನ್ನು ಬಿತ್ತಲು ಆರಂಭಿಸಿದರು. ಗಿಡವಾಯಿತು. ನೋಡುನೋಡುತ್ತಿದ್ದಂತೆ ಇದು ಹೆಚ್ಚಾಗುತ್ತಾ ಹೋಗಿ ಹೊನ್ನಾಳಿ, ಮಸ್ತಿಗಟ್ಟ, ಹೆಗ್ಗೂರು, ಹೊಲಿಗೆ, ವಜ್ರಹಳ್ಳಿ, ದೊಂಗ್ರಿ, ಕಲ್ಲೇಶ್ವರ, ಅಡಗೂರು, ಅಗಸೂರು, ಸಿರಗುಂಜಿ, ಎಲೊಗಡ್ಡೆಗಳಲ್ಲಿ ಖಾಲಿ ಭೂಮಿಯಲ್ಲಿ ಅರಣ್ಯ ಇಲಾಖೆ ಇವರ ಗಿಡಗಳನ್ನು ನೆಡಿಸಿತು. ಇಂದು ಇವೆಲ್ಲಾ ಸೇರಿ 30 ಸಾವಿರಕ್ಕೂ ಅಧಿಕ ಮರಗಳಾಗಿವೆ.

ವರ್ಷಕ್ಕೆ 30 ಸಾವಿರ ಗಿಡಗಳ ನಾಟಿ[ಬದಲಾಯಿಸಿ]

ಇದರೊಂದಿಗೆ ತಾನು ಬೆಳೆಸಿದ ಸಸಿಗಳನ್ನುಹೊನ್ನಳ್ಳಿ ಭಾಗದಅರಣ್ಯ ಪ್ರದೇಶದಲ್ಲಿ, ಸರ್ಕಾರಿ ಕಚೇರಿ, ಶಾಲೆ,ಮನೆಗಳ ಆವರಣ, ರಸ್ತೆಗಳ ಪಕ್ಕದಲ್ಲಿ ನೆಡಲು ಪ್ರಾರಂಭಿಸಿದ್ದರು. ವರ್ಷಕ್ಕೆ ಈಕೆ ಸುಮಾರು 30 ಸಾವಿರ ಸಸಿಗಳನ್ನ ನೆಟ್ಟು ಪೋಷಿಸುವ ಕಾರ್ಯವನ್ನು ನಿರಂತರ ಮಾಡುತ್ತಾ ಬಂದರು. ಈಕೆ ನೆಟ್ಟು ಪೋಷಿಸಿದ ಸಸಿಗಳು ಇಂದು ಬೆಳೆದು ಹೆಮ್ಮರವಾಗಿ ಸಾವಿರಾರು ಜನರಿಗೆ ಗಾಳಿ ನೆರಳನ್ನ ಕೊಡುವ ಕೆಲಸ ಮಾಡುತ್ತಿವೆ. 72 ವರ್ಷವಾದರೂ ಈಗಲೂ ಪರಿಸರ ಪ್ರೇಮವನ್ನು ತೋರುತ್ತಿರುವ ಇವರು ಯಾವ ಯಾವ ಸಸಿಯನ್ನು ಯಾವ ಸಮಯದಲ್ಲಿ ನೆಡಬೇಕು. ಯಾವ ಸಂದರ್ಭದಲ್ಲಿ ಹೂವು ಹಣ್ಣು ಬಿಡುತ್ತವೆ ಈ ಎಲ್ಲ ಮಾಹಿತಿಗಳು ಇವರ ಜ್ಞಾನ ಭಂಡಾರದಲ್ಲಿದೆ. ಮನೆಯಲ್ಲಿ ಬಡತನ, ಹಾಲಕ್ಕಿ ಬುಡಕಟ್ಟು ಜನಾಂಗದಲ್ಲಿ ಜನಿಸಿದ್ದರೂ ಕಳೆದ 60 ವರ್ಷಗಳಿಂದ ಪರಿಸರ ಪ್ರೇಮ ತೋರಿಸುತ್ತಿದ್ದು, ಲಕ್ಷಾಂತರ ಸಸಿಗಳನ್ನು ನೆಟ್ಟಿದ್ದಾರೆ. ಮರಗಳ ವಿಜ್ಞಾನಿ ಎಂದೇ ಉತ್ತರ ಕನ್ನಡದಲ್ಲಿ ಇವರನ್ನು ಕರೆಯಲಾಗುತ್ತದೆ. ಕೆಲವೊಮ್ಮೆ ಅರಣ್ಯದಲ್ಲಿ ತಾನು ನೆಟ್ಟ ಮರವನ್ನ ಮರಗಳ್ಳರು ಕಡಿದಾಗ ತುಳಸಿ ಕಡಿದ ಮರವನ್ನ ಅಪ್ಪಿ ಅತ್ತ ಘಟನೆಗಳು ಸಾಕಷ್ಟಿವೆ. ವಯಸ್ಸಾದರೂ ಈಗಲೂ ಲಕ್ಷಾಂತರ ಸಸಿಗಳನ್ನು ಬೆಳೆಸುವ ಮೂಲಕ ಪರಿಸರ ಪ್ರೀತಿಯನ್ನು ತೋರುತ್ತಿದ್ದಾರೆ. ಕಾಡಿನಿಂದ ತಂದ ಬೀಜಗಳನ್ನು ಸಸಿ ಮಾಡಿ ಶಾಲೆ ಆವರಣ, ರಸ್ತೆ, ಗುಡ್ಡ ಬೆಟ್ಟದಲ್ಲಿ ನೆಟ್ಟು ಪೋಷಿಸ ತೊಡಗಿದರು. ಒಂದೇ ವರ್ಷದಲ್ಲಿ 30 ಸಾವಿರ ಸಸಿಗಳನ್ನು ನೆಟ್ಟು ಅರಣ್ಯ ಇಲಾಖೆಯಿಂದ ಹಣ ನೀಡದಿದ್ದರೂ, ಅವುಗಳ ರಕ್ಷಣೆಯನ್ನು ಮಾಡಿದ್ರು.

ಪ್ರಸಿದ್ಧಿ[ಬದಲಾಯಿಸಿ]

  • 300ಕ್ಕೂ ಹೆಚ್ಚು ಕಾಡು ಮರಗಳ ಬಗ್ಗೆ ಮಾಹಿತಿ ಇರುವ ಇವರು `ಸಸ್ಯ ವಿಜ್ಞಾನಿ’ ಎಂದೇ ಪ್ರಸಿದ್ಧಿ ಪಡೆದಿದ್ದಾರೆ.[೨]
  • ಇವರು ‘ಅರಣ್ಯದ ವಿಶ್ವಕೋಶ’ ಎಂದೇ ಪ್ರಸಿದ್ಧಿ ಪಡೆದಿದ್ದಾರೆ[೩].
  • ವೃಕ್ಷ ದೇವಿ ಎಂದು ಕೂಡ ಪ್ರಸಿದ್ಧರಾಗಿದ್ದಾರೆ .

ಪ್ರಶಸ್ತಿ[ಬದಲಾಯಿಸಿ]

  • ರಾಜ್ಯೋತ್ಸವ ಪ್ರಶಸ್ತಿ
  • ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷಮಿತ್ರ ಪ್ರಶಸ್ತಿ.[೪]
  • ಇವರ ಈ ಪರಿಸರ ಕಾಯಕಕ್ಕೆ ಕೇಂದ್ರ ಸರ್ಕಾರ ಈ ವರ್ಷ ಗಣರಾಜ್ಯೋತ್ಸವ ದಿನ ಅವರಿಗೆ ಪದ್ಮ ಶ್ರೀ ಪ್ರಶಸ್ತಿ ನೀಡಿ ಗೌರವಿಸಿದೆ.

ಉಲ್ಲೇಖ[ಬದಲಾಯಿಸಿ]

  1. https://www.kannadaprabha.com/karnataka/2020/feb/02/this-septuagenarian-barefoot-ecologist-turns-grey-landscape-into-green-411182.html
  2. . https://publictv.in/encyclopedia-of-forest-tulasi-gowda-got-prestigious-civilian-award-padmashree-award/amp Archived 2020-01-25 ವೇಬ್ಯಾಕ್ ಮೆಷಿನ್ ನಲ್ಲಿ.
  3. .https://www.thehindu.com/todays-paper/tp-national/tp-karnataka/plant-two-saplings-a-year/article2080738.ece
  4. .http://www.kannadavani.news/uttarakannada-thulsigawda-padma-shri-award-karnataka-india/