ನುಗ್ಗೆ ಸೊಪ್ಪು
Moringa oleifera | |
---|---|
Scientific classification | |
Unrecognized taxon (fix): | Moringa |
ಪ್ರಜಾತಿ: | M. oleifera
|
Binomial name | |
Moringa oleifera | |
Synonyms[೧] | |
|
ಕಹಿಗುಣವಿರುವ ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ, Moringa Leaves Benefits: ದಿನನಿತ್ಯ ಆಹಾರ ಪದಾರ್ಥಗಳಲ್ಲಿ ವಿವಿಧ ರೀತಿಯ ಸೊಪ್ಪು ತರಕಾರಿಗಳನ್ನು ಬಳಕೆ ಮಾಡುತ್ತೇವೆ. ಆದರೆ ನುಗ್ಗೆ ಸೊಪ್ಪನ್ನು ಸೇವಿಸುವುದು ಸ್ವಲ್ಪ ಕಡಿಮೆ. ಕಹಿ ಗುಣವಿರುವ ಕಾರಣ ಈ ಸೊಪ್ಪನ್ನು ಇಷ್ಟ ಪಡುವುದು ಕಡಿಮೆಯೇ. ಡ್ರಮ್ ಸ್ಟಿಕ್ ಎಲೆಗಳು ಎಂಬ ಹೆಸರಿನಿಂದಲೂ ಕರೆಯುವ ಈ ನುಗ್ಗೆ ಸೊಪ್ಪು [೨] ಆರೋಗ್ಯದ ವಿಚಾರದಲ್ಲಿ ಸಂಜೀವಿನಿಯಾಗಿದೆ.
ನುಗ್ಗೆ ಸೊಪ್ಪು ಹಲವು ಆರೋಗ್ಯ ಸಮಸ್ಯೆಗಳಿಗೆ ಔಷಧಿ
[ಬದಲಾಯಿಸಿ]ನುಗ್ಗೆ ಮರದ ಪ್ರತಿಯೊಂದು ಭಾಗವು ಔಷಧೀಯ ಗುಣವನ್ನು ಹೊಂದಿದೆ. ಹೀಗಾಗಿ ಆಯುರ್ವೇದದಲ್ಲಿ ಔಷಧಿಗಳ ತಯಾರಿಕೆಯಲ್ಲಿ ನುಗ್ಗೆ ಮರನುಗ್ಗೆಕಾಯಿದ ಪ್ರತಿಯೊಂದು ಭಾಗವನ್ನು ಬಳಸಲಾಗುತ್ತದೆ. ಅದರಲ್ಲಿಯೂ ಈ ನುಗ್ಗೆ ಸೊಪ್ಪಿನಲ್ಲಿ ವಿಟಮಿನ್ ಸಿ, ಎ, ಬಿ-ಕಾಂಪ್ಲೆಕ್ಸ್, ಪೊಟ್ಯಾಶಿಯಂ, ಕ್ಯಾಲ್ಸಿಯಂ, ಪ್ರೊಟೀನ್, ಕಾರ್ಬೋಹೈಡ್ರೇಟ್, ಕಬ್ಬಿಣ, ಮೆಗ್ನೀಷಿಯಂ, ಸೋಡಿಯಂ ಹೇರಳವಾಗಿದ್ದು, ಅನೇಕ ರೀತಿಯ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುತ್ತವೆ. ಮನೆಯ ಸುತ್ತ ಮುತ್ತ ನುಗ್ಗೆಯ ಮರವಿದ್ದರೆ ನುಗ್ಗೆ ಸೊಪ್ಪಿನಿಂದ ಮನೆ ಮದ್ದನ್ನು ತಯಾರಿಸಿ ಆರೋಗ್ಯ ಸಮಸ್ಯೆಯನ್ನು ದೂರವಾಗಿಸಿಕೊಳ್ಳಬಹುದು.
ಆರೋಗ್ಯ ಸಮಸ್ಯೆಗಳಿಗೆ ನುಗ್ಗೆ ಸೊಪ್ಪಿನ ಮನೆ ಮದ್ದುಗಳು
[ಬದಲಾಯಿಸಿ]ನುಗ್ಗೆ ಸೊಪ್ಪಿನಿಂದ ಸಾರು ತಯಾರಿಸಿ, ಅದಕ್ಕೆ ಬೆಳ್ಳುಳ್ಳಿ ರಸ ಬೆರೆಸಿ ಕುಡಿದರೆ ಜ್ವರ ಕಡಿಮೆಯಾಗುತ್ತದೆ. ನುಗ್ಗೆ ಸೊಪ್ಪಿನ ರಸವನ್ನು ಕುದಿಸಿ ಕುಡಿಯುತ್ತಿದ್ದರೆ ಮಲಬದ್ಧತೆ ಸಮಸ್ಯೆ ಯೂ ದೂರವಾಗುತ್ತದೆ.
ನುಗ್ಗೆಸೊಪ್ಪು, ಹೆಚ್ಚಿದ ಶುಂಠಿ, ಹರಳು ಗಿಡದ ಎಲೆ, ತುಳಸಿ ಎಲೆಗಳನ್ನು ಎಳ್ಳೆಣ್ಣೆಯಲ್ಲಿ ಹುರಿದು ಬಟ್ಟೆಯಲ್ಲಿ ಕಟ್ಟಿ ಬೆನ್ನುನೋವು ಇರುವ ಜಾಗಕ್ಕೆ ಬಿಸಿ ಶಾಖವಿಟ್ಟರೆ ಬೆನ್ನುನೋವು ಕಡಿಮೆಯಾಗುತ್ತದೆ. ನುಗ್ಗೆಸೊಪ್ಪು, ತುಳಸಿ ಎಲೆಗಳನ್ನು ಹುರಿದು ಕೀಲುನೋವಿರುವ ಜಾಗಕ್ಕೆ ಶಾಖವನ್ನು ಕೊಟ್ಟರೆ ನೋವು ನಿವಾರಣೆಯಾಗುತ್ತದೆ.
ತಲೆ ನೋವಿನಿಂದ ಬಳಲುತ್ತಿರುವವರು ನುಗ್ಗೆ ಸೊಪ್ಪಿನ ಒಂದು ತೊಟ್ಟು ರಸವನ್ನು ಕಿವಿಗೆ ಹಾಕುತ್ತಿದ್ದರೆ ತಲೆನೋವು ಕಡಿಮೆಯಾಗುತ್ತದೆ. ನುಗ್ಗೆ ಸೊಪ್ಪನ್ನು ನೀರಿನಲ್ಲಿ ಬೇಯಿಸಿ ರಸ ತೆಗೆದು ಅದಕ್ಕೆ ಅಡಿಗೆ ಉಪ್ಪು ನಿಂಬೆರಸ, ಕಾಳು ಮೆಣಸಿನ ಪುಡಿಯನ್ನು ಬೆರೆಸಿ ಪ್ರತಿದಿನ ಬೆಳಗ್ಗೆ ಸೇವಿಸಿದರೆ ಸಂಭೋಗದ ಶಕ್ತಿಯು ವೃದ್ಧಿಯಾಗುತ್ತದೆ. ನುಗ್ಗೆ ಸೊಪ್ಪನ್ನು ನುಣ್ಣಗೆ ರುಬ್ಬಿ ಮೂಲವ್ಯಾಧಿ ಮೊಳಕೆಗಳಿಗೆ ಹಚ್ಚುವುದರಿಂದ ಪರಿಣಾಮಕಾರಿಯಾಗಿ ಕೆಲಸ ಮಾಡುತ್ತದೆ. ಬೇಯಿಸಿ ತೆಗೆದ ನುಗ್ಗೆ ಸೊಪ್ಪಿನ ರಸಕ್ಕೆ ಹಾಲು ಸಕ್ಕರೆ ಬೆರೆಸಿ ಮಕ್ಕಳಿಗೆ ಕುಡಿಸುವುದರಿಂದ ರಕ್ತವು ಶುದ್ಧಿಯಾಗುತ್ತದೆ. ನುಗ್ಗೆ ಸೊಪ್ಪನ್ನು ಬೇಯಿಸಿ ರಸ ತೆಗೆದು ಅದಕ್ಕೆ ನಿಂಬೆರಸ ಹಿಂಡಿ ಒಂದು ವಾರಗಳ ಕಾಲ ಸೇವಿಸಿದರೆ ತಲೆಸುತ್ತುವ ಸಮಸ್ಯೆಯೂ ದೂರವಾಗುತ್ತದೆ. ನುಗ್ಗೆ ಸೊಪ್ಪಿನ ಜ್ಯೂಸು ಕುಡಿಯುವುದರಿಂದ ಮೂತ್ರ ದ ಕಲ್ಲು ನಿವಾರಣೆ ಆಗುತ್ತದೆ.ಇದು ದೇಹದಲ್ಲಿ ಕೆಂಪು ರಕ್ತ ಕಣಗಳನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅಧಿಕ ರಕ್ತದ ಒತ್ತಡ ನಿವಾರಣೆ ಆಗಲು, ನುಗ್ಗೆ ಸೊಪ್ಪನ್ನು ದಿನ ನಿತ್ಯ ಆಹಾರದಲ್ಲಿ ಉಪಯೋಗಿಸಿದರೆ ಒಳ್ಳೆಯದು. ದೇಹದ ತೂಕವನ್ನು, ಕೊಲೆಸ್ಟ್ರೋಲ್ ಕಡಿಮೆ ಆಗಲು, ನುಗ್ಗೆ ಸೊಪ್ಪಿನ ಸಾರು, ಪಲ್ಯ ಮಾಡಿ ತಿನ್ನಬೇಕು. ಎಳೆಯ ನುಗ್ಗೆಸೊಪ್ಪು ಹಾಗೂ ನುಗ್ಗೆಯ ಹೂವಿನಿಂದ ತಯಾರಿಸಿದ ಸೂಪನ್ನು ಕುಡಿಯುತ್ತಿದ್ದರೆ ರಕ್ತಹೀನತೆ ಸಮಸ್ಯೆಯೂ ನಿವಾರಣೆಯಾಗುತ್ತದೆ. ನುಗ್ಗೆ ಸೊಪ್ಪಿನ ಎಲೆಗಳನ್ನು ನೀರಿನಲ್ಲಿ ಹಾಕಿ ಕಿವುಚಿ, ಆ ನೀರನ್ನು ತಲೆಗೆ ಹಚ್ಚಿ,೩೦ ನಿಮಿಷದ ನಂತರ ತಲೆಗೆ ಸ್ನಾನ ಮಾಡುವುದರಿಂದ ಕೂದಲಿನ ಸಮಸ್ಯೆ ನಿವಾರಣೆಯಾಗಿ ಕೂದಲು ಸೊಂಪಾಗಿ ಬೆಳೆಯುತ್ತದೆ. ಹೊಟ್ಟೆಯಲ್ಲಿನ ಜಂತು ಹುಳುಗಳ ನಿವಾರಣೆಗೂ ನುಗ್ಗೆ ಸೊಪ್ಪು, ನುಗ್ಗೆಕಾಯಿ, ಹೆಚ್ಚು ಪರಿಣಾಮ ಕಾರಿಯಾಗಿದೆ.
ಉಲ್ಲೇಖ
[ಬದಲಾಯಿಸಿ]- ↑ Olson, M. E. (2010). Flora of North America Committee (ed.). eFlora summary: Moringaceae: Drumstick Family. Flora of North America, North of Mexico. Vol. 7. pp. 167–169.
- ↑ https://vtvvitla.com/health-benefits-6/