ವಿಷಯಕ್ಕೆ ಹೋಗು

ವಾರ್ಧಕ ಷಟ್ಪದಿ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಲಕ್ಷಣ

  • ಛಂದಸ್ಸಿನಲ್ಲಿ ವಾರ್ಧಕ ಷಟ್ಪದಿಯು ಷಟ್ಪದಿಗಳಲ್ಲಿನ ಪ್ರಮುಖ ಪ್ರಕಾರಗಳಲ್ಲೊಂದು. ಮುದ್ದಣ ವಿರಚಿತ ಶ್ರೀರಾಮ ಪಟ್ಟಾಭಿಷೇಕ ಇರುವುದು ವಾರ್ಧಕ ಷಟ್ಪದಿಯಲ್ಲಿಯೇ. ವಾರ್ಧಕ ಷಟ್ಪದಿಯಲ್ಲಿ ಆರು ಪಾದಗಳಿರುತ್ತವೆ. ೧(1),೨,೪,೫ನೆಯ ಸಾಲುಗಳು ಸಮನಾಗಿದ್ದು, ೫ ಮಾತ್ರೆಯ ನಾಲ್ಕು ಗಣಗಳಿರುತ್ತವೆ. ೩ ಮತ್ತು ೬ನೆಯ ಪಾದಗಳಲ್ಲಿ ೫ ಮಾತ್ರೆಯ ಆರು ಗಣಗಳಿದ್ದು, ಕೊನೆಯಲ್ಲಿ ಒಂದು ಗುರು ಇರುತ್ತದೆ. ಪದ್ಯವು ಆದಿಪ್ರಾಸದಿಂದ ಕೂಡಿರುತ್ತದೆ.ಇದರಲ್ಲಿ ಪ್ರತಿ ಪಾದದಲ್ಲಿಯೂ ಆರಂಭದ ಒಂದೆರಡನೆಯ ಸ್ವರಗಳ ನಡುವೆ ಒಂದೇ ವಿಧವಾದ ವ್ಯಂಜನವಿರುವುದು. ಇದು ಆದಿ ಪ್ರಾಸ.

ಉದಾಹರಣೆ:

ಬಲ್ಗಯ್ಯ ನೃಪರಂಜಿ ತಡೆಯದೆರಘೂದ್ವಹನ
ಸೊಲ್ಗೇಳಿ ನಮಿಸಲಿಳೆಯೊಳ್ ಚರಿಸುತಧ್ವರದ
ನಲ್ಗುದುರೆ ಬಂದು ವಾಲ್ಮೀಕಿಯ ನಿಜಾಶ್ರಮದ ವಿನಿಯೋಗದುಪವನದೊಳು
ಪುಲ್ಗಳ ಪಸುರ್ಗೆಳಸಿ ಪೊಕ್ಕಡಾ ತೋಟಗಾ
ವಲ್ಗೆ ತನ್ನೊಡನಾಡಿಗಳಕೂಡಿ ಲೀಲೆ ಮಿಗೆ
ಬಿಲ್ಗೊಂಡು ನಡೆತಂದವಂ ಕಂಡನರ್ಚಿತ ಸುವಾಜಿಯಂ ವೀರಲವನು

ಇದರ ಛಂದಸ್ಸಿನ ಪ್ರಸ್ತಾರ

ಬಲ್ಗಯ್ಯ | ನೃಪರಂಜಿ | ತಡೆಯದೆರ | ಘೂದ್ವಹನ
ಸೊಲ್ಗೇಳಿ | ನಮಿಸಲಿಳೆ | ಯೊಳ್ ಚರಿಸು | ತಧ್ವರದ
ನಲ್ಗುದುರೆ | ಬಂದು ವಾ | ಲ್ಮೀಕಿಯನಿ | ಜಾಶ್ರಮದ | ವಿನಿಯೋಗ | ದು ಪವನದೊ| ಳು
ಪುಲ್ಗಳಪ | ಸುರ್ಗೆಳಸಿ | ಪೊಕ್ಕಡಾ | ತೋಟಗಾ
ವಲ್ಗೆತ | ನ್ನೊಡನಾಡಿ | ಗಳಕೂಡಿ | ಲೀಲೆಮಿಗೆ
ಬಿಲ್ಗೊಂಡು | ನಡೆತಂದ | ವಂಕಂಡ | ನರ್ಚಿತಸು | ವಾಜಿಯಂ | ವೀರಲವ | ನು

'|' ಸಂಜ್ಞೆಯು ಗಣವಿಭಾಗವನ್ನು ತೋರಿಸುತ್ತದೆ. ಪದ್ಯವು ಕೆಳಗಿನಂತೆ ಗಣವಿಂಗಡನೆಯಾಗಿರುವುದನ್ನು ಗಮನಿಸಿ:

  • ಮೊದಲ ಸಾಲಿನ ಗಣದ ಲೆಕ್ಕ:
  • --U| UU-U|UUUUU|-UUU
೫|೫|೫|೫
೫|೫|೫|೫
೫|೫|೫|೫|೫|೫|-
೫|೫|೫|೫
೫|೫|೫|೫
೫|೫|೫|೫|೫|೫|-

ನೋಡಿ

ಉಲ್ಲೇಖ