ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ ೧೮೩೭: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
'''ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ'''ವು ಕ್ರಿ.ಶ. ೧೮೩೭ರಲ್ಲಿ ನಡೆದ ಸ್ವಾತಂತ್ರ್ಯ ಹೋರಾಟ. ಚಾರಿತ್ರಿಕವಾಗಿ ಕ್ರಿ.ಶ. ೧೮೫೭ ಸಿಪಾಯಿ ದಂಗೆಯನ್ನು ನಾವು ಭಾರತೀಯರು ಬ್ರಿಟಿಷರ ವಿರುದ್ಧ ನಡೆಸಿದ ಮೊದಲ ಸ್ವಾತಂತ್ರ್ಯ ಸಂಗ್ರಾಮವೆಂದು ಚರಿತ್ರೆಯಲ್ಲಿ ನೋಡಬಹುದು.
'''ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟ'''ವು ಕ್ರಿ.ಶ. ೧೮೩೭ರಲ್ಲಿ ಬ್ರಿಟಿಷರ ವಿರುದ್ಧ ಕೊಡಗು ಮತ್ತು ದಕ್ಷಿಣ ಕನ್ನಡದ ಅರೆಭಾಷಿಗ ಜನರ ಮುಂದಾಳತ್ವದಿಂ ನಡೆದ ಸ್ವಾತಂತ್ರ್ಯ ಹೋರಾಟ. ಇದನ್ನು ಕೊಡಗು-ಕೆನರಾ ಬಂಡಾಯ, ಕಲ್ಯಾಣಪ್ಪನ ಕಾಟಕಾಯಿ, ಅಮರ ಸುಳ್ಯದ ರೈತರ ದಂಗೆ ಎಂದು ಕರೆಯುತ್ತಾರೆ.


==ಇತಿಹಾಸ==
==ಇತಿಹಾಸ==

೦೧:೦೦, ೧೯ ಆಗಸ್ಟ್ ೨೦೨೧ ನಂತೆ ಪರಿಷ್ಕರಣೆ

ಅಮರ ಸುಳ್ಯ ಸ್ವಾತಂತ್ರ್ಯ ಹೋರಾಟವು ಕ್ರಿ.ಶ. ೧೮೩೭ರಲ್ಲಿ ಬ್ರಿಟಿಷರ ವಿರುದ್ಧ ಕೊಡಗು ಮತ್ತು ದಕ್ಷಿಣ ಕನ್ನಡದ ಅರೆಭಾಷಿಗ ಜನರ ಮುಂದಾಳತ್ವದಿಂ ನಡೆದ ಸ್ವಾತಂತ್ರ್ಯ ಹೋರಾಟ. ಇದನ್ನು ಕೊಡಗು-ಕೆನರಾ ಬಂಡಾಯ, ಕಲ್ಯಾಣಪ್ಪನ ಕಾಟಕಾಯಿ, ಅಮರ ಸುಳ್ಯದ ರೈತರ ದಂಗೆ ಎಂದು ಕರೆಯುತ್ತಾರೆ.

ಇತಿಹಾಸ

ಕ್ರಿ.ಶ. ೧೮೫೭ ರ ಸಿಪಾಯಿ ದಂಗೆಯನ್ನು ನಾವು ಭಾರತೀಯರು ಬ್ರಿಟಿಷರ ವಿರುದ್ಧ ನಡೆಸಿದ ಮೊದಲ ಸ್ವಾತಂತ್ರ್ಯ ಸಂಗ್ರಾಮವೆಂದು ಚರಿತ್ರೆಯಲ್ಲಿ ಕಾಣುತ್ತೇವೆ. ಇದಕ್ಕಿಂತ ೨೦ ವರ್ಷಗಳ ಪೂರ್ವದಲ್ಲಿಯೇ ಈ ಹಿಂದಕ್ಕೆ ಕೊಡಗಿನ ಅವಿಭಾಜ್ಯ ಅಂಗವಾಗಿದ್ದ ಸುಳ್ಯದ ಪಕ್ಕದ ಕುಗ್ರಾಮವಾಗಿದ್ದ ಉಬರಡ್ಕ ಮಿತ್ತೂರು ಗ್ರಾಮದಲ್ಲಿ ಆರಂಭವಾಗಿ ಪೂರ್ತಿ ಮೇಲಿನ ಹಾಗೂ ಕೆಳಗಿನ ಕೊಡಗು ಮತ್ತು ಪೂರ್ತಿ ದಕ್ಷಿಣ ಕನ್ನಡಕ್ಕೆ ಹರಡಿ ಬ್ರಿಟಿಷರಿಗೆ ಸೆಡ್ಡು ಹೊಡೆದ ರೈತಾಪಿ ಸಮೂಹದ ಹೋರಾಟವು ಇಂದು ಅಮರ ಸುಳ್ಯ ದಂಗೆ ಎಂದು ದಾಖಲಾಗಿರುತ್ತದೆ.[೧]

1834ರ ಸುಮಾರಿಗೆ ಅತ್ತ ಕೊಡಗಿನಲ್ಲಿ ಆಡಳಿತ ನಡೆಸುತ್ತಿದ್ದ ಚಿಕ್ಕ ವೀರರಾಜೇಂದ್ರನನ್ನು ಬ್ರಿಟಿಷರು ಪಟ್ಟದಿಂದ ಕೆಳಗಿಳಿಸಿ, ಅಲ್ಲಿನ ಸಾಮ್ರಾಜ್ಯವನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡರು. ಅಲ್ಲದೆ, ಪಂಜ ಸೀಮೆಗೆ ಒಳಪಟ್ಟಿದ್ದ ಪುತ್ತೂರು, ಸುಳ್ಯವನ್ನು ಕೊಡಗಿನಿಂದ ಬೇರ್ಪಡಿಸಿ, ದಕ್ಷಿಣ ಕನ್ನಡ ಜಿಲ್ಲೆಗೆ ಸೇರಿಸಿದರು. ಕೊಡಗಿನ ಜೊತೆ ಅವಿನಾಭಾವ ಸಂಬಂಧ ಹೊಂದಿದ್ದ ಪ್ರದೇಶವನ್ನು ಬ್ರಿಟಿಷರು ವಿಭಜಿಸಿದ್ದಲ್ಲದೆ, ಹೆಚ್ಚುವರಿಯಾಗಿ ಕಂದಾಯವನ್ನು ಹೇರಿದ್ದು ಜನರನ್ನು ರೊಚ್ಚಿಗೆಬ್ಬಿಸಿತ್ತು. ಇತ್ತ ದಕ್ಷಿಣ ಕನ್ನಡ ಜಿಲ್ಲೆಯ ಮಂಜೇಶ್ವರ, ಕುಂಬಳೆ, ಹೊಸದುರ್ಗ, ಬಂಟ್ವಾಳ, ಉಡುಪಿ, ಫರಂಗಿಪೇಟೆ, ಮಂಗಳೂರು, ಬ್ರಹ್ಮಾವರ, ಕುಂದಾಪುರ ಹೀಗೆ ಇಷ್ಟೂ ಭಾಗವನ್ನು ಸೌತ್ ಕೆನರಾ ಎಂದು ಬ್ರಿಟಿಷರು ಗುರುತಿಸಿದ್ದರು. ಟಿಪ್ಪು ಮರಣಾ ನಂತರ ಈ ಭಾಗದಲ್ಲಿ ಪ್ರಭುತ್ವ ಸ್ಥಾಪಿಸಿದ್ದ ಬ್ರಿಟಿಷರು ಸುಳ್ಯ, ಕೊಡಗನ್ನೂ ಆಕ್ರಮಿಸಿದ್ದರು.[೨]

ಹೋರಾಟಕ್ಕೆ ಕಾರಣಗಳು

ಇದರ ಜೊತೆಗೆ, ಅಲ್ಲೀ ವರೆಗೂ ರಾಜನಿಗೆ ವಸ್ತುಗಳ ರೂಪದಲ್ಲಿ ಕಂದಾಯ ಕಟ್ಟುವ ಪದ್ಧತಿ ಇತ್ತು. ಇದನ್ನು ಬದಿಗೊತ್ತಿ ಬ್ರಿಟಿಷರು ದಕ್ಷಿಣ ಕನ್ನಡ ಮತ್ತು ಕೊಡಗಿನಲ್ಲಿ ಹಣದ ರೂಪದಲ್ಲಿ ಕಂದಾಯ ಕಟ್ಟುವಂತೆ ಜನರ ಮೇಲೆ ಕಟ್ಟಳೆ ಹೇರಿದ್ದು ಹೈರಾಣು ಮಾಡಿತ್ತು. ತಮ್ಮನ್ನು ವಿದೇಶಿಯರು ಬಂದು ಆಳುತ್ತಿದ್ದಾರೆ, ಕಂದಾಯದ ನೆಪದಲ್ಲಿ ಹಣದ ರೂಪದಲ್ಲಿ ತಮ್ಮ ಬೆವರಿನಿಂದ ಗಳಿಸಿದ ಸಂಪತ್ತನ್ನು ಹೀರುತ್ತಿದ್ದಾರೆ ಎನ್ನುವುದು ಜನರಿಗೆ ಮನದಟ್ಟು ಆಗತೊಡಗಿತ್ತು. ಬೆಳೆ ಕೊಯ್ಲಿಗೆ ಬಂದ ಕೂಡಲೇ ಅದರ ಬಹುಪಾಲನ್ನು ಕಡಿಮೆ ಬೆಲೆಗೆ ದಲ್ಲಾಳಿಗಳಿಗೆ ಮಾರಾಟ ಮಾಡಿ, ಹಣವನ್ನು ಕಂದಾಯ ರೂಪದಲ್ಲಿ ಕಟ್ಟುತ್ತಿದ್ದ ಸ್ಥಿತಿ ಜನರಲ್ಲಿ ಒಂದೆಡೆ ಹಸಿವು, ಮತ್ತೊಂದೆಡೆ ಆಡಳಿತದ ವಿರುದ್ಧ ದಂಗೆ ಏಳಲು ಪ್ರೇರಣೆಯಾಗಿತ್ತು.

ಉಲ್ಲೇಖಗಳು

  1. "1834-37 ರ ಬ್ರಿಟಿಷರ ವಿರುದ್ಧ ವಿಶಾಲ ಕೊಡಗಿನ 'ಅಮರಸುಳ್ಯ ಸ್ವಾತಂತ್ರ್ಯ ಸಮರ' | News13". 30 October 2020.
  2. Karnataka, Headline. "ಬಾವುಟಗುಡ್ಡೆಯಲ್ಲಿ 13 ದಿನ ರಾರಾಜಿಸಿತ್ತು ಸ್ವಾತಂತ್ರ್ಯ ಬಾವುಟ ! ಸುಳ್ಯದ ರೈತರು ಹಚ್ಚಿದ್ದ ಸೇಡಿನ ಕಿಚ್ಚಿಗೆ ಬೆಚ್ಚಿ ಓಡಿದ್ದರು ಬ್ರಿಟಿಷರು !". Headline Karanataka (in English).{{cite web}}: CS1 maint: unrecognized language (link)