ಮೂರನೇ ಮೈಸೂರು ಯುದ್ಧ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
ಚು r2.7.3) (Robot: Modifying en:Third Anglo–Mysore War to en:Third Anglo-Mysore War
೪೦ ನೇ ಸಾಲು: ೪೦ ನೇ ಸಾಲು:
[[de:Dritter Mysore-Krieg]]
[[de:Dritter Mysore-Krieg]]
[[en:Third Anglo-Mysore War]]
[[en:Third Anglo-Mysore War]]
[[hi:तृतीय आंग्ल-मैसूर युद्ध]]
[[mr:तिसरे इंग्रज-म्हैसूर युद्ध]]
[[mr:तिसरे इंग्रज-म्हैसूर युद्ध]]
[[pl:III wojna z Królestwem Majsur (1789-1792)]]
[[pl:III wojna z Królestwem Majsur (1789-1792)]]

೨೦:೩೧, ೨೧ ಫೆಬ್ರವರಿ ೨೦೧೩ ನಂತೆ ಪರಿಷ್ಕರಣೆ

ಮೂರನೇ ಆಂಗ್ಲ-ಮೈಸೂರು ಯುದ್ಧ
Part of ಆಂಗ್ಲ-ಮೈಸೂರು ಯುದ್ಧಗಳು

ಯುದ್ಧದಲ್ಲಿ ಭಾಗಿಯಾದ ರಾಜ್ಯಗಳು
ಕಾಲ: ೧೭೮೯ - ೧೭೯೨
ಸ್ಥಳ: ದಕ್ಷಿಣ ಭಾರತ
ಪರಿಣಾಮ: ಮೈಸೂರು ಸಂಸ್ಥಾನದ ಸೋಲು. ಶ್ರೀರಂಗಪಟ್ಟಣದ ಒಪ್ಪಂದ.
ಪ್ರದೇಶಗಳ ಕೈಬದಲು: ಮೈಸೂರು ಸಂಸ್ಥಾನದ ಅರ್ಧ ಪ್ರದೇಶ ನಷ್ಟ
ಕದನಕಾರರು
ಮೈಸೂರು ಸಂಸ್ಥಾನ ಬ್ರಿಟಿಷ್ ಸಾಮ್ರಾಜ್ಯ
ಸೇನಾಧಿಪತಿಗಳು
ಟಿಪ್ಪು ಸುಲ್ತಾನ


ಮೂರನೆಯ ಮೈಸೂರು ಯುದ್ಧ (೧೭೮೯-೧೭೯೨) ಮೈಸೂರು ರಾಜ್ಯಕ್ಕೂ ಬ್ರಿಟಿಷರಿಗೂ ನಡೆದ ಯುದ್ಧ. ನಾಲ್ಕು ಬಾರಿ ನಡೆದ ಯುದ್ಧ ಸರಣಿಯಲ್ಲಿ ಇದು ಮೂರನೆಯದು.

ಫ್ರೆಂಚರೊಂದಿಗೆ ಮೈತ್ರಿಯಿದ್ದ ಮೈಸೂರಿನ ರಾಜ ಟಿಪ್ಪು ಸುಲ್ತಾನನು ಬ್ರಿಟಿಷ್ ಅಧೀನದಲ್ಲಿದ್ದ ಟ್ರಾವಂಕೂರಿನ ಮೇಲೆ ೧೭೮೯ರಲ್ಲಿ ದಂಡೆತ್ತಿ ಹೋದನು. ಆಗ ಪ್ರಾರಂಭವಾದ ಯುದ್ಧ ಮುಂದಿನ ಮೂರು ವರ್ಷಗಳವರೆಗೆ ಮುಂದುವರೆದು ಟಿಪ್ಪೂ ಸುಲ್ತಾನನ ಪರಾಭವದೊಂದಿಗೆ ಪರ್ಯವಸಾನಗೊಂಡಿತು. ತಮ್ಮದೇ ದೇಶದ ಫ್ರೆಂಚ್ ಕ್ರಾಂತಿಯನ್ನು ಎದುರಿಸುವುದರಲ್ಲಿ ಮಗ್ನರಾದ ಫ್ರೆಂಚರು , ಬ್ರಿಟಿಷರ ನೌಕಾದಳದಿಂದಲೂ ಹಿಮ್ಮೆಟ್ಟಿಸಲ್ಪಟ್ಟುದರಿಂದ , ಟಿಪ್ಪು ಸುಲ್ತಾನನ ನಿರೀಕ್ಷೆಯಂತೆ ಬೆಂಬಲ ನೀಡಲಿಲ್ಲ.

ಟಿಪ್ಪು ಸುಲ್ತಾನ ರಾಕೆಟ್ಟುಗಳ ಪಡೆಯಿಂದ ಧಾಳಿ ಮಾಡಿದ್ದು ಈ ಯುದ್ಧದ ಹೆಗ್ಗಳಿಕೆ. ಈ ಧಾಳಿಯ ಪರಿಣಾಮ ನೋಡಿ ಮಾರುಹೋದ ಬ್ರಿಟಿಷ್ ವಿಜ್ಞಾನಿ ವಿಲಿಯಮ್ ಕಾಂಗ್ರೀವನು ಮುಂದೆ ಕಾಂಗ್ರೀವ್ ರಾಕೆಟುಗಳನ್ನು ಸಂಶೋಧಿಸಿದನು.

ಈ ಯುದ್ಧದ ಪರಿಣಾಮವಾಗಿ ಟಿಪ್ಪುವು ತನ್ನ ರಾಜ್ಯದ ಕೆಲ ಭಾಗಗಳನ್ನು ಬ್ರಿಟಿಷರ ಬೆಂಬಲಿಗರೋ , ಏಜಂಟರೋ ಆಗಿದ್ದ ಮರಾಠರು, ಹೈದರಾಬಾದಿನ ನಿಜಾಮ ಮತ್ತು ಮದ್ರಾಸ್ ಪ್ರೆಸಿಡೆನ್ಸಿಗಳವರಿಗೆ ಹಂಚಿಕೊಡಬೇಕಾಗಿ ಬಂದು , ಇದರಿಂದ ಮೈಸೂರು ರಾಜ್ಯದ ವಿಸ್ತೀರ್ಣ ತೀವ್ರವಾಗಿ ಕುಸಿಯಿತು. ಮಲಬಾರ್‍, ಸೇಲಂ, ಬಳ್ಳಾರಿ ಮತ್ತು ಅನಂತಪುರ ಜಿಲ್ಲೆಗಳು ಮದ್ರಾಸ್ ಪ್ರೆಸಿಡೆನ್ಸಿಗೆ ಸೇರಿಹೋದವು. ಈ ಯುದ್ಧದ ಕೊನೆಯಲ್ಲಿ ಶ್ರೀರಂಗಪಟ್ಟಣದ ಒಪ್ಪಂದವಾಗಿ, ಅದರ ಪ್ರಕಾರ ಟಿಪ್ಪು ತನ್ನ ಅರ್ಧ ರಾಜ್ಯವನ್ನು ಬ್ರಿಟಿಷರಿಗೆ ಒಪ್ಪಿಸಿದ್ದಷ್ಟೇ ಅಲ್ಲದೇ , ತನ್ನಿಬ್ಬರು ಮಕ್ಕಳನ್ನು ಬ್ರಿಟಿಷರಲ್ಲಿ ಒತ್ತೆ ಇಡಬೇಕಾಗಿ ಬಂದಿತು.