ಎಂ. ಎಂ. ಕಲಬುರ್ಗಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
No edit summary
No edit summary
೧ ನೇ ಸಾಲು: ೧ ನೇ ಸಾಲು:
{{Infobox Writer
{{Infobox Writer
| name = ಡಾ. ಎಂ.ಎಂ.ಕಲಬುರ್ಗಿ
| name = ಡಾ. ಎಂ.ಎಂ.ಕಲಬುರ್ಗಿ
| image = M. M. Kalburgi.jpg
| image = M._M._Kalburgi.jpg
| imagesize =
| imagesize =
| caption = ಶ್ರೀ ಕಲಬುರ್ಗಿಯವರು
| caption = ಶ್ರೀ ಕಲಬುರ್ಗಿಯವರು

೨೧:೧೧, ೭ ಸೆಪ್ಟೆಂಬರ್ ೨೦೧೫ ನಂತೆ ಪರಿಷ್ಕರಣೆ

ಡಾ. ಎಂ.ಎಂ.ಕಲಬುರ್ಗಿ
ಚಿತ್ರ:M. M. Kalburgi.jpg
ಶ್ರೀ ಕಲಬುರ್ಗಿಯವರು
ಜನನ೧೯೩೮
ಗುಬ್ಬೇವಾಡ, ಸಿಂದಗಿ ತಾಲ್ಲೂಕು, ವಿಜಾಪುರ ಜಿಲ್ಲೆ
ಮರಣ೩೦.೦೮.೨೦೧೫
ಧಾರವಾಡ
ವೃತ್ತಿಲೇಖಕ, ಪ್ರಾಧ್ಯಾಪಕ, ಕುಲಪತಿ
ರಾಷ್ಟ್ರೀಯತೆಭಾರತೀಯ
ಪ್ರಕಾರ/ಶೈಲಿಕಥೆ, ಕವನ, ಕಾದಂಬರಿ
ವಿಷಯಕರ್ನಾಟಕ, ರಾಮಾಯಣ,
ಸಾಹಿತ್ಯ ಚಳುವಳಿನವೋದಯ

ಮಲ್ಲೇಶಪ್ಪ ಮಡಿವಾಳಪ್ಪ ಕಲಬುರ್ಗಿಯವರು ೧೯೩೮-೨೦೧೫ ನವಂಬರ ೨೮ರಂದು ವಿಜಾಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುಬ್ಬೆವಾಡ ಗ್ರಾಮದಲ್ಲಿ ಜನಿಸಿದರು. ಇವರ ತಾಯಿ ಗುರಮ್ಮ ತಂದೆ ಮಡಿವಾಳಪ್ಪ. ನಾಲ್ಕೈದು ಸೋದರರು. ಮತ್ತು ಅವರ ಹೆಂಡತಿ ಮಕ್ಕಳೊಂದಿಗೆ ಕೂಡಿದ ಕುಟುಂಬ. ತಂದೆಯವರು ವೃದ್ಧಾಪ್ಯದಲ್ಲೂ ಸಧೃಢರಾಗಿ ತಮ್ಮ ಕಾರ್ಯ ಚಟುವಟಿಕೆಗಳಲ್ಲಿ ತೊಡಗಿದ್ದ ವ್ಯಕ್ತಿ.

ಪರಿಚಯ

  • 1962ರಲ್ಲಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಭೋಧಕರಾಗಿ ಸೇವೆ ಆರಂಭಿಸಿದ ಅವರು 1966ರಲ್ಲಿ ಕರ್ನಾಟಕ ವಿಶ್ವವಿದ್ಯಾನಿಲಯದ ಅಧ್ಯಾಪಕರಾದರು[೧]. ಹಂಪಿ ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. 'ಬಸವಣ್ಣನವರ ಕುರಿತ ಶಾಸನಗಳು' ಎಂ.ಎಂ.ಕಲಬುರಗಿ ಅವರ ಮೊದಲ ಕೃತಿ. 41 ಪ್ರಾಚೀನ ಗ್ರಂಥಗಳನ್ನು ಸಂಪಾದಿಸಿರುವ ಅವರು, 100 ಕೃತಿಗಳನ್ನು ರಚನೆ ಮಾಡಿದ್ದಾರೆ. ಸೃಜನಶೀಲ ಸಾಹಿತ್ಯದಲ್ಲೂ ಆಸಕ್ತಿಯಿರುವ ಕಲಬುರ್ಗಿಯವರು ಎರಡು ನಾಟಕಗಳು ಮತ್ತು ಒಂದು ಕವನ ಸಂಕಲವನ್ನು ಪ್ರಕಟಿಸಿದ್ದಾರೆ.
  • ಕನ್ನಡ ಸಂಸ್ಕೃತಿ, ಇತಿಹಾಸ, ಸಾಹಿತ್ಯ, ಶಾಸನ, ಜಾನಪದ, ವ್ಯಾಕರಣ, ಹಸ್ತಪ್ರತಿ, ಗ್ರಂಥ ಸಂಪಾದನಾ ಶಾಸ್ತ್ರ ಸೇರಿದಂತೆ ಹಲವು ವಿಷಯಗಳಲ್ಲಿ ಅವರು ಹಲವಾರು ಸಂಶೋಧನೆಗಳನ್ನು ಮಾಡಿದ್ದರು. ಗದಗದಲ್ಲಿ ಶ್ರೀ ತೋಂಟದಾರ್ಯ ಮಠದ ವೀರಶೈವ ಅಧ್ಯಯನ ಸಂಸ್ಥೆಯ ಸಂಸ್ಥಾಪಕರು. ಕಲಬುರ್ಗಿಯವರು, ಕರ್ನಾಟಕದ ಬಹು ಪ್ರಸಿದ್ಧ ವಿದ್ವಾಂಸರಲ್ಲಿ ಒಬ್ಬರು.
  • ಅವರ ಅಧ್ಯಯನ ಮತ್ತು ಕೊಡುಗೆಗಳು, ಶಾಸನಶಾಸ್ತ್ರ, ಸಾಹಿತ್ಯ ಚರಿತ್ರೆ, ಛಂದಸ್ಸು, ಇತಿಹಾಸ, ವಾಸ್ತುಶಿಲ್ಪ, ಗ್ರಂಥಸಂಪಾದನೆ, ಹಸ್ತಪ್ರತಿಶಾಸ್ತ್ರ, ಜಾನಪದ, ಸ್ಥಳನಾಮಗಳ ಅಧ್ಯಯನ, ಸಾಹಿತ್ಯ ವಿಮರ್ಶೆ ಮುಂತಾದ ಹತ್ತು ಹಲವು ಕ್ಷೇತ್ರಗಳಲ್ಲಿ ಹರಡಿಕೊಂಡಿವೆ. ಇವೆಲ್ಲದರ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಅಧ್ಯಯನದ ವಿಶಾಲವಾದ ಪರಿಪ್ರೇಕ್ಷ್ಯವಿದೆ. ಸೃಜನಶೀಲ ಸಾಹಿತ್ಯದಲ್ಲೂ ಆಸಕ್ತಿಯಿರುವ ಕಲಬುರ್ಗಿಯವರು ಎರಡು ನಾಟಕಗಳು ಮತ್ತು ಒಂದಿ ಕವನ ಸಂಕಲವನ್ನು ಪ್ರಕಟಿಸಿದ್ದಾರೆ.
  • ಅವರು ಕರ್ನಾಟಕ ವಿಶ್ವವಿದ್ಯಾಲಯದಿಂದ ಬಿ.ಎ.(1960) ಮತ್ತು ಎಂ.ಎ(1962) ಪದವಿಗಳನ್ನು ಪ್ರಥಮ ದರ್ಜೆ, ಪ್ರಥಮ ಸ್ಥಾನದೊಂದಿಗೆ ಪಡೆದರು. 1968 ರಲ್ಲಿ, ಅವರು ಸಲ್ಲಿಸಿದ, ‘ಕವಿರಾಜಮಾರ್ಗ ಪರಿಸರದ ಕನ್ನಡ ಸಾಹಿತ್ಯ’ ಎಂಬ ಮಹಾಪ್ರಬಂಧಕ್ಕೆ ಪಿ.ಎಚ್.ಡಿ. ಪದವಿ ಬಂತು. 1962 ರಲ್ಲಿ ಕರ್ನಾಟಕ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು.
  • ಕಲಬುರ್ಗಿಯವರು 1966 ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದ ‘ಕನ್ನಡ ಅಧ್ಯಯನ ಪೀಠ’ದಲ್ಲಿ ಅಧ್ಯಾಪಕರಾಗಿ ನೇಮಕವಾದರು. ಅಲ್ಲಿ ಅನೇಕ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹುದ್ದೆಗಳನ್ನು ನಿರ್ವಹಿಸಿದರು. ಸುಮಾರು ಹತ್ತೊಂಬತ್ತು ವರ್ಷಗಳು ಪ್ರಾಧ್ಯಾಪಕರಾಗಿದ್ದ ಕಲಬರ್ಗಿಯವರು, ಒಟ್ಟಿನಲ್ಲಿ ಮೂವತ್ತೊಂಬತ್ತು ವರ್ಷಗಳು ಶಿಕ್ಷಕ ವೃತ್ತಿಯಲ್ಲಿ ತೊಡಗಿಕೊಂಡಿದ್ದರು. ಅವರು ಆ ಅವಧಿಯಲ್ಲಿ ಅನೇಕ ಸಂಶೋಧನಯೋಜನೆಗಳನ್ನು ಯಶಸ್ವಿಯಾಗಿ ನಡೆಸಿಕೊಟ್ಟರು.
  • 1998-2001 ರ ಕಾಲಾವಧಿಯಲ್ಲಿ ಕಲಬುರ್ಗಿಯವರು ಹಂಪಿಯ ಕನ್ನಡ ವಿಶ್ವವಿದ್ಯಾಲಯಉಪ ಕುಲಪತಿಗಳಾಗಿದ್ದರು. ಅಲ್ಲಿಯೂ ಅನೇಕ ಮಹತ್ವದ ಯೋಜನೆಗಳನ್ನು ಆಗು ಮಾಡಿದ ಕಲಬುರ್ಗಿಯವರು ನಿವೃತ್ತಿಯ ನಂತರವೂ ಸಂಶೋಧನಾ ಚಟುವಟಿಕೆಗಳಲ್ಲಿಯೇ ಮಗ್ನರಾಗಿದ್ದಾರೆ. ಕರ್ನಾಟಕ ಸರ್ಕಾರವು ಪ್ರಕಟಿಸಿದ ಹದಿನೈದು ಸಂಪುಟಗಳ ‘ವಚನ ಸಾಹಿತ್ಯ ಸಂಪುಟಮಾಲೆಗೆ ಅವರು ಪ್ರಧಾನ ಸಂಪಾದಕರಾಗಿದ್ದರು. ಹಾಗೆಯೇ ‘ಸಮಗ್ರ ಕೀರ್ತನ ಸಂಪುಟ’ಗಳ ಸಂಪಾದಕ ಮಂಡಳಿಯ ಸದಸ್ಯರಾಗಿದ್ದರು.

ಸಂಶೋಧಕರಾಗಿ

  • ಕಳೆದ ನಾಲ್ಕು ದಶಕಗಳಿಗೂ ಹೆಚ್ಚು ಕಾಲದಿಂದ ಸಂಶೋಧನೆಯು ಕಲಬುರ್ಗಿಯವರ ಪ್ರಧಾನ ಆಸಕ್ತಿಯಾಗಿದೆ. ಅವರು ಎಪ್ಪತ್ತೈದಕ್ಕೂ ಹೆಚ್ಚು ಪುಸ್ತಕಗಳನ್ನೂ ನಾನೂರಕ್ಕೂ ಹೆಚ್ಚು ಸಂಶೋಧನ ಲೀಖನಗಳನ್ನೂ ಪ್ರಕಟಿಸಿದ್ದಾರೆ. ಈ ಬರವಣಿಗೆಯ ವ್ಯಾಪ್ತಿ ಮತ್ತು ಆಳಗಳು ಗಮನೀಯ ವಾಗಿವೆ.ಈ ಕಿರು ಟಿಪ್ಪಣಿಯಲ್ಲಿ ಅವರ ಮುಖ್ಯವಾದ ಕೃತಿಗಳನ್ನು ಮಾತ್ರ ಪಟ್ಟಿಮಾಡಲು ಸಾಧ್ಯ.
  • ಕರ್ನಾಟಕದ ಸಂಸ್ಕೃತಿಯನ್ನು ಕುರಿತ ಅನೇಕ ಸಂಶೋಧನ ಲೇಖನಗಳನ್ನು ಒಳಗೊಂಡಿವೆ. ಕಲಬುರ್ಗಿಯವರಲ್ಲಿ ಉತ್ತರ ಕರ್ನಾಟಕದ ಹಿರಿಯ ವಿದ್ವಾಂಸರ ವಿಶಿಷ್ಟ ಲಕ್ಷಣಗಳು ಮತ್ತು ಹಳೆಯ ಮೈಸೂರಿನ ಕಡೆಯ ವಿದ್ವತ್ ಪರಂಪರೆಯ ಅನನ್ಯ ಲಕ್ಷಣಗಳ ಸಂಯೋಜನೆಯನ್ನು ಕಾಣಬಹುದು.
  • ತನ್ನ ಸಂಶೋಧನೆಯ ಫಲಿತಗಳ ನಿಕರತೆಯ ಬಗ್ಗೆ ನಂಬಿಕೆಯಿದ್ದಾಗ, ಅವರು ವಿವಾದಗಳನ್ನು ಹುಟ್ಟುಹಾಕಲು ಎಂದಿಗೂ ಹಿಂಜರಿದಿಲ್ಲ. ಅವರು ತಮ್ಮ ಆಕರಗಳನ್ನು ಖಚಿತಪಡಿಸಿಕೊಂಡಿರುತ್ತಾರೆ ಮತ್ತು ಮಹತ್ವದ ಒಳನೋಟಗಳನ್ನು ನೀಡುತ್ತಾರೆ. ಆಕರಗಳ ಶೋಧನೆಯಲ್ಲಿ ಹಲವು ದೇಶಗಳನ್ನು ಸುತ್ತಿರುವ ಕಲಬರ್ಗಿಯವರು ಅವುಗಳನ್ನು ವಿವೇಚನೆಯಿಂದ ಬಳಸಿಕೊಂಡಿದ್ದಾರೆ.

ಶಿಕ್ಷಣ

ಕಲಬುರ್ಗಿಯವರ ಪ್ರಾಥಮಿಕ ಶಿಕ್ಷಣ ಯರಗಲ್ಲನಲ್ಲಿ, ಮಾಧ್ಯಮಿಕ ಶಿಕ್ಷಣ ಸಿಂದಗಿಯಲ್ಲಿ ಜರುಗಿತು.ಅವಿಭಕ್ತ ಕುಟುಂಬದಿಂದ ಬಂದವರು. ವಿಜಾಪುರ ವಿಜಯಾ ಕಾಲೇಜ್ ನಲ್ಲಿ ಬಿ.ಎ.(ಕನ್ನಡ)ಪದವಿಯನ್ನು ಪ್ರಥಮ ವರ್ಗದಲ್ಲಿ, ಪ್ರಥಮ ರ್ಯಾಂಕ್, ಮತ್ತು ಯು.ಜಿ.ಸಿ.ಶಿಷ್ಯವೇತನ, ದ ಸಯಾಯ ಪಡೆದು ಗಳಿಸಿದರು. ಬಳಿಕ, ೧೯೬೨ರಲ್ಲಿ ಧಾರವಾಡಕರ್ನಾಟಕ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದರು.

ವೃತ್ತಿ ಜೀವನ

೧೯೬೨ರಲ್ಲಿ ಧಾರವಾಡದ ಕರ್ನಾಟಕ ಕಾಲೇಜಿನಲ್ಲಿ ಬೋಧಕರಾಗಿ ಸೇವೆ ಪ್ರಾರಂಭಿಸಿದ ಕಲಬುರ್ಗಿಯವರು, ೧೯೬೬ರಲ್ಲಿ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರಾದರು. ೧೯೮೨ರಲ್ಲಿ ಅಲ್ಲಿಯೆ ವಿಭಾಗ ಮುಖ್ಯಸ್ಥರಾದರು. ಹಂಪಿಯಲ್ಲಿಯ ಕನ್ನಡ ವಿಶ್ವವಿದ್ಯಾಲಯದ ಕುಲಪತಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾದರು.

ಸಂಶೋಧನ ಕ್ಷೇತ್ರ

ಡಾ| ಎಂ.ಎಂ.ಕಲಬುರ್ಗಿಯವರು ಸಾಹಿತ್ಯ, ಸಂಸ್ಕೃತಿ, ಜಾನಪದ, ಶಾಸನ, ಇತಿಹಾಸ, ಹಸ್ತಪ್ರತಿಶಾಸ್ತ್ರ ಮೊದಲಾದ ಕ್ಷೇತ್ರಗಳಲ್ಲಿ ಸಂಶೋಧನೆಗಳನ್ನು ಮಾಡಿದ್ದಾರೆ. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಜಾನಪದ ಸಮ್ಮೇಲನವನ್ನು ರೂಪಿಸಿದವರಲ್ಲಿ ಒಬ್ಬರು. ಕನ್ನಡ ವಿಶ್ವವಿದ್ಯಾಲಯದಲ್ಲಿ ದೇಸಿ ಸಮ್ಮೇಲನವನ್ನು ಸ್ಥಾಪಿಸಿದವರು ಡಾ| ಕಲಬುರ್ಗಿ. ಗದಗಿನ ಶ್ರೀ ತೋಂಟದಾರ್ಯ ಮಠದ ವೀರಶೈವ ಅಧ್ಯಯನ ಸಂಸ್ಥೆಯ ಸಂಸ್ಥಾಪಕರು. ಇದಲ್ಲದೆ ಮೈಸೂರಿನ ಸುತ್ತೂರು ಮಠದ ಸಮಗ್ರ ವಚನ ಸಾಹಿತ್ಯ ಪ್ರಕಟಣಮಾಲೆಯ , ಬೆಳಗಾವಿಯ ನಾಗನೂರು ಮಠದ ವೀರಶೈವ ಅಧ್ಯಯನ ಅಕಾಡೆಮಿಯ ಹಾಗು ಶಿವಮೊಗ್ಗೆಯ ಆನಂದಪುರ ಮಠದ ಮಲೆನಾಡು ವೀರಶೈವ ಅಧ್ಯಯನ ಸಂಸ್ಥೆಯ ನಿರ್ದೇಶಕರಾಗಿ ಅಮೂಲ್ಯ ಸೇವೆ ಸಲ್ಲಿಸಿದ್ದಾರೆ.

ಸಾಹಿತ್ಯ

  • ಡಾ| ಎಂ.ಎಂ.ಕಲಬುರ್ಗಿಯವರು ಸೃಜನಶೀಲ ಹಾಗು ಸಂಶೋಧನೆ ಈ ಎರಡೂ ಪ್ರಕಾರಗಳಲ್ಲಿ ಎಪ್ಪತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿದ್ದಾರೆ.ಈ ಶತಮಾನದ ಶ್ರೇಷ್ಠ ಚಿಂತಕರಲ್ಲೊಬ್ಬರೆಂದು ಹೆಸರುವಾಸಿಯಾದ ಕಲಬುರ್ಗಿಯವರು ಸದಾ ಓದು, ಬರಹ, ಚಿಂತನೆ, ಪ್ರಕಟಣೆ, ಮಾರ್ಗದರ್ಶನ ಮತ್ತಿತರ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿರುತ್ತಾರೆ. ಅತ್ಯಂತ ಸರಳ ವ್ಯಕ್ತಿತ್ವದ ವಿನಯಶೀಲರಾದ ಅವರು ಕನ್ನಡದ ಕ್ರಿಯಾಶೀಲ ಚೇತನವೆಂದು ಹೆಸರಾಗಿದ್ದಾರೆ.
  • ಸಾಹಿತ್ಯ , ಶಾಸನ, ಜಾನಪದ, ನಾಮ ವಿಜ್ಞಾನ, ಗ್ರಂಥ ಸಂಪಾದನೆ,ಹಸ್ತಪ್ರತಿಶಾಸ್ತ್ರ, ಮೊದಲಾದ ಕ್ಷೇತ್ರಗಳಲ್ಲಿ ಅಮೂಲ್ಯ ಕೊಡುಗೆಯನ್ನು ಕೊಟ್ಟಿದ್ದಾರೆ. 2011 ನವೆಂಬರ್ 11,12 ಮತ್ತು 13ರಂದು ಮೂಡಬಿದಿರೆಯ ವಿದ್ಯಾಗಿರಿಯಲ್ಲಿ ನಡೆಯಲಿರುವ "ಆಳ್ವಾಸ್ ನುಡಿಸಿರಿ 2011" ಇದರ ಸರ್ವಾಧ್ಯಕ್ಷರಾಗಿ ಎಂ.ಎಂ.ಕಲಬುರ್ಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಕೃತಿಗಳು

ಕವನ ಸಂಕಲನ

  • ನೀರು ನೀರಡಿಸಿತ್ತು

ನಾಟಕ

  • ಕೆಟ್ಟಿತ್ತು ಕಲ್ಯಾಣ

ಸಂಶೋಧನೆ

  1. ಕವಿರಾಜಮಾರ್ಗ ಪರಿಸರದ ಕನ್ನಡಸಾಹಿತ್ಯ’, 1973
  2. ಮಾರ್ಗ’ - ನಾಲ್ಕು ಸಂಪುಟಗಳು 1988-2004
  3. ಐತಿಹಾಸಿಕ’, 1984

ಕೆಲವು ಸಂಶೋಧನ ಗ್ರಂಥಗಳು

  1. ಮಾರ್ಗ (೧,೨,೩,೪)
  2. ಕನ್ನಡ ಹಸ್ತಪ್ರತಿ ಶಾಸ್ತ್ರ
  3. ಕನ್ನಡ ಗ್ರಂಥ ಸಂಪಾದನ ಶಾಸ್ತ್ರ
  4. ಕನ್ನಡ ಸಂಶೋಧನ ಶಾಸ್ತ್ರ
  5. ಕನ್ನಡ ನಾಮವಿಜ್ಞಾನ
  6. ಧಾರವಾಡ ಜಿಲ್ಲೆಯ ಶಾಸನಸೂಚಿ
  7. ಮಹಾರಾಷ್ಟ್ರದ ಕನ್ನಡ ಶಾಸನಗಳು
  8. ಶಾಸನಗಳಲ್ಲಿ ಶಿವಶರಣರು
  9. ಶಬ್ದಮಣಿದರ್ಪಣ ಸಂಗ್ರಹ
  10. ಕನ್ನಡ ಕೈಫಿಯತ್ತುಗಳು
  11. ಕೆಳದಿ ಸಂಸ್ಥಾನ ಸಮಗ್ರ ಅಧ್ಯಯನ
  12. ಸ್ವಾದಿ ಅರಸು ಮನೆತನ
  13. ಸಾರಂಗಶ್ರೀ

ಶಾಸನಶಾಸ್ತ್ರ

  1. ಅ. ಶಾಸನ ವ್ಯಾಸಂಗ, ಭಾಗ 1 ಮತ್ತು ಭಾಗ 2, 1974, 1975
  2. ಆ. ಶಾಸನ ವ್ಯಾಸಂಗ: ಸಮಾಧಿ, ಬಲಿದಾನ, ವೀರಮರಣ ಸ್ಮಾರಕಗಳು, 1980
  3. ಇ. ಶಾಸನ ಸಂಪದ, 1968
  4. ಈ. ಧಾರವಾಡ ಜಿಲ್ಲೆಯ ಶಾಸನಸೂಚಿ, 1975

ವಿವಿಧ ಶೈಕ್ಷಣಿಕ ಶಿಸ್ತುಗಳನ್ನು ಕುರಿತ ಗ್ರಂಥಗಳು

  1. ಕನ್ನಡ ಗ್ರಂಥಸಂಪಾದನಶಾಸ್ತ್ರ, 1972
  2. ಕನ್ನಡ ಹಸ್ತಪ್ರತಿಶಾಸ್ತ್ರ
  3. ಕನ್ನಡ ಸಂಶೋಧನಶಾಸ್ತ್ರ
  4. ಕನ್ನಡ ಸ್ಥಳನಾಮವಿಜ್ಞಾನ

ಗ್ರಂಥಸಂಪಾದನೆ

ಕಲಬುರ್ಗಿಯವರು 30 ಕ್ಕೂ ಹೆಚ್ಚು ಪ್ರಾಚೀನ ಕೃತಿಗಳನ್ನು ಸಂಪಾದನೆ ಮಾಡಿದ್ದಾರೆ.

  1. ಶಿವಯೋಗ ಪ್ರದೀಪಿಕಾ, 1976
  2. ಕೊಂಡಗುಳಿ ಕೇಶಿರಾಜನ ಕೃತಿಗಳು, 1978
  3. ಬಸವಣ್ಣನ ಟೀಕಿನ ವಚನಗಳು. 1978
  4. ಸಿರುಮನಾಯಕನ ಸಾಂಗತ್ಯ, 1983.

ಜಾನಪದ

  • ಜಾನಪದ ಮಾರ್ಗ, 1995
  • ಉತ್ತರ ಕರ್ನಾಟಕದ ಜನಪದ ಸಾಹಿತ್ಯ, 1978

ಸೃಜನಶೀಲ ಬರೆಹಗಳು

  1. :ನೀರು ನೀರಡಿಸಿತ್ತು (ಕವನಗಳು)
  2. :ಕೆಟ್ಟಿತ್ತು ಕಲ್ಯಾಣ, (ನಾಟಕ)

ಸಂಪಾದನೆ

ಕನ್ನಡ ವಿಶ್ವವಿದ್ಯಾಲಯದ ಮೂಲಕ (೧)ಶಿವಶರಣರ ಸಮಗ್ರ ವಚನ ಸಂಪುಟಗಳನ್ನು ಹಾಗು (೨)ಹರಿದಾಸರ ಸಮಗ್ರ ಕೀರ್ತನ ಸಂಪುಟಗಳನ್ನು ಪ್ರಕಟಗೊಳಿಸಿದ್ದಾರೆ.

ಪ್ರಶಸ್ತಿ

ಕಲಬುರ್ಗಿಯವರು ತಮ್ಮ ಸಾಧನೆಗಾಗಿ ಅನೇಕ ಪ್ರಶಸ್ತಿಗಳು ಮತ್ತು ಗೌರವಗಳನ್ನು ಪಡೆದಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಗೌರಪ್ರಶಸ್ತಿ, ಪಂಪ ಪ್ರಶಸ್ತಿ, ಚಿದಾನಂದ ಪ್ರಶಸ್ತಿ ಮತ್ತು ವಿಶ್ವಮಾನವ ಪ್ರಶಸ್ತಿಗಳು ಅವುಗಳಲ್ಲಿ ಕೆಲವು. ಅವರ ‘ಮಾರ್ಗ-4’ ಎಂಬ ಕೃತಿಯು ಕೇಂದ್ರಸಾಹಿತ್ಯ ಅಕಾಡೆಮಿಯ ಪ್ರಶಸ್ತಿಯನ್ನು ಗಳಿಸಿದೆ. ಅವರು ಬರೆದಿರುವ ಆರು ಪುಸ್ತಕಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ಪುಸ್ತಕ ಬಹುಮಾನಗಳನ್ನು ಪಡೆದಿವೆ. ಕಲಬುರ್ಗಿ-60 ಮತ್ತು ಮಹಾಮಾರ್ಗಗಳು ಈ ವಿದ್ವಾಂಸರಿಗೆ ಸಲ್ಲಿಸಿರುವ ಅಭಿನಂದನ ಗ್ರಂಥಗಳಲ್ಲಿ ಮುಖ್ಯವಾದವು.

  1. 'ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಜಾನಪದ ಪ್ರಶಸ್ತಿ'
  2. 'ಆರು ಪುಸ್ತಕಗಳಿಗೆ ರಾಜ್ಯ ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ'
  3. 'ರಾಜ್ಯೋತ್ಸವ ಪ್ರಶಸ್ತಿ'
  4. 'ಪಂಪ ಪ್ರಶಸ್ತಿ'
  5. 'ವರ್ಧಮಾನ ಪ್ರಶಸ್ತಿ'
  6. 'ವಿಶ್ವಮಾನವ ಪ್ರಶಸ್ತಿ'
  7. ೨೦೦೬ನೆಯ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
  8. ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ,
  9. ಚಿದಾನಂದ ಪ್ರಶಸ್ತಿ,
  10. ನೃಪತುಂಗ ಪ್ರಶಸ್ತಿ,
  11. ನಾಡೋಜ ಪ್ರಶಸ್ತಿ ಸೇರಿದಂತೆ ಹಲವು ಪಶಸ್ತಿಗಳು ಬಂದಿದ್ದವು.

ಗೌರವ

ಡಾ. ಎಂ.ಎಂ. ಕಲಬುರ್ಗಿಯವರ ಸೇವೆಯನ್ನು ಅನುಲಕ್ಷಿಸಿ ಅನೇಕ ಗೌರವಗಳು ಅವರಿಗೆ ಸಂದಿವೆ. ತಂಜಾವೂರಿನಲ್ಲಿ ನಡೆದ All India Placename Confernceಕ್ಕೆ ಕಲಬುರ್ಗಿಯವರು ಅಧ್ಯಕ್ಷರಾಗಿದ್ದರು. ಮಹಾಲಿಂಗಪುರದಲ್ಲಿ ನಡೆದ ಅಖಿಲ ಕರ್ನಾಟಕ ಪ್ರಥಮ ಶ್ರೀಕೃಷ್ಣ ಪಾರಿಜಾತ ಸಮ್ಮೇಳನದ ಅಧ್ಯಕ್ಷರಾಗಿದ್ದರು.

ವಿವಾದದ ಹೇಳಿಕೆ

'ದೇವತೆಗಳು ಮೂರ್ತ ಸ್ವರೂಪವಾದ್ದರಿಂದ ದೇವತೆಗಳ ವಿಗ್ರಹ, ಮೂರ್ತಿಗಳ ಮೇಲೆ ಮೂತ್ರ ಮಾಡಿದರೂ ತಪ್ಪೇನು ಇಲ್ಲ. ವಿಗ್ರಹಗಳಿಗೆ ಕಾಡುವ ಕಾಪಾಡುವ ಶಕ್ತಿ ಇಲ್ಲ. ಇದರಿಂದ ಪೂಜೆ ನಿಲ್ಲಿಸಿದ್ರೆ ಅಪಾಯವಿಲ್ಲ' ಎಂದು ಎಂ.ಎಂ. ಕಲಬುರ್ಗಿ ಅವರು ನೀಡಿದ್ದ ಹೇಳಿಕೆ ಬಗ್ಗೆ ಭಾರೀ ವಿರೋಧ ವ್ಯಕ್ತವಾಗಿತ್ತು.

ನಿಧನ

ಧಾರವಾಡ, ಆ.30 : ಗುಂಡಿನ ದಾಳಿಯಲ್ಲಿ ಹಿರಿಯ ಸಂಶೋಧಕ, ಸಾಹಿತಿ ಎಂ.ಎಂ.ಕಲಬುರ್ಗಿ ಸಾವನ್ನಪ್ಪಿದ್ದಾರೆ. ಧಾರವಾಡದಲ್ಲಿನ ಅವರ ಮನೆಗೆ ನುಗ್ಗಿದ ಅಪರಿಚಿತರು ಎರಡು ಸುತ್ತು ಗುಂಡು ಹಾರಿಸಿದ್ದಾರೆ. ಹಣೆ ಮತ್ತು ಎದೆಗೆ ಗುಂಡು ತಗುಲಿದ ಕಲಬುರ್ಗಿ ಅವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ[೨]

ಉಲ್ಲೇಖಗಳು

  1. "ಸಾಹಿತಿ ಎಂ.ಎಂ ಕಲಬುರ್ಗಿ ದುಷ್ಕರ್ಮಿಗಳ ಗುಂಡಿಗೆ ಬಲಿ". prajavani.net. Retrieved 2015-08-31.
  2. "ಡಾ.ಎಂ.ಎಂ.ಕಲಬುರ್ಗಿ ಸಂಕ್ಷಿಪ್ತ ಪರಿಚಯ". kannada.oneindia.com. Retrieved 2015-08-31.