ಹಲಗಣಿ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
೩೨ ನೇ ಸಾಲು: ೩೨ ನೇ ಸಾಲು:
=='''ಹವಾಮಾನ'''==
=='''ಹವಾಮಾನ'''==


* <big>ಬೆಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆ(ಎಪ್ರೀಲನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
* <big>ಬೇಸಿಗೆ-ಚಳಿಗಾಲ</big>ದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ '''೪೨.೭ ಡಿಗ್ರಿ'''ವರೆಗೆ(ಏಪ್ರಿಲ್ ನಲ್ಲಿ) , ಅತೀ ಕಡಿಮೆ ಅಂದರೆ '''೯.೫ ಡಿಗ್ರಿ''' ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.


* <big>ಬೇಸಿಗೆಕಾಲ</big> - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್
* <big>ಬೇಸಿಗೆಕಾಲ</big> - '''೩೫°C-೪೨°C ಡಿಗ್ರಿ''' ಸೆಲ್ಸಿಯಸ್

೧೪:೨೬, ೩೦ ಅಕ್ಟೋಬರ್ ೨೦೧೭ ನಂತೆ ಪರಿಷ್ಕರಣೆ

ಹಲಗಣಿ
ಹಲಗಣಿ
village
Population
 (೨೦೧೨)
 • Total೧೫೦೦

ಹಲಗಣಿ ಗ್ರಾಮವು ಕರ್ನಾಟಕ ರಾಜ್ಯದ ವಿಜಯಪುರ ಜಿಲ್ಲೆಯ ವಿಜಯಪುರ ತಾಲ್ಲೂಕಿನಲ್ಲಿದೆ.

ಭೌಗೋಳಿಕ

ಗ್ರಾಮವು ಭೌಗೋಳಿಕವಾಗಿ ೧೬* ೩೨' ೧೦"x ಉತ್ತರ ಅಕ್ಷಾಂಶ ಮತ್ತು ೭೫* ೩೧' ೧೯" ಪೂರ್ವ ರೇಖಾಂಶದಲ್ಲಿ ಬರುತ್ತದೆ.

ಹವಾಮಾನ

  • ಬೇಸಿಗೆ-ಚಳಿಗಾಲದಲ್ಲಿ ಹವಾಗುಣವು ಹಿತಕರವಾಗಿದ್ದು, ಸಾಧಾರಣ ಪ್ರಮಾಣದ ಮಳೆಯಾಗುತ್ತದೆ. ಬೇಸಿಗೆಯಲ್ಲಿ ಅತಿ ಹೆಚ್ಚು ಉಷ್ಣತೆ ಅಂದರೆ ೪೨.೭ ಡಿಗ್ರಿವರೆಗೆ(ಏಪ್ರಿಲ್ ನಲ್ಲಿ) , ಅತೀ ಕಡಿಮೆ ಅಂದರೆ ೯.೫ ಡಿಗ್ರಿ ಸೆಲ್ಸಿಯಸವರೆಗೆ (ಡಿಸೆಂಬರನಲ್ಲಿ) ಉಷ್ಣತೆ ದಾಖಲಾಗಿದೆ.
  • ಬೇಸಿಗೆಕಾಲ - ೩೫°C-೪೨°C ಡಿಗ್ರಿ ಸೆಲ್ಸಿಯಸ್
  • ಚಳಿಗಾಲ ಮತ್ತು
  • ಮಳೆಗಾಲ - ೧೮°C-೨೮°C ಡಿಗ್ರಿ ಸೆಲ್ಸಿಯಸ್.
  • ಮಳೆ - ಪ್ರತಿ ವರ್ಷ ಮಳೆ ೩೦೦ - ೬೦೦ಮಿಮಿ ಗಳಸ್ಟು ಆಗಿರುತ್ತದೆ.
  • ಗಾಳಿ -ಗಾಳಿ ವೇಗ ೧೮.೨ ಕಿಮಿ/ಗಂ (ಜೂನ), ೧೯.೬ ಕಿಮಿ/ಗಂ (ಜುಲೈ)ಹಾಗೂ ೧೭.೫ ಕಿಮಿ/ಗಂ (ಅಗಸ್ಟ್) ಇರುತ್ತದೆ.

ಸಾಂಸ್ಕೃತಿಕ

ಮುಖ್ಯ ಭಾಷೆ ಕನ್ನಡ. ಆದರೆ ವಿವಿಧ ಸಂಸ್ಕೃತಿಗಳ ಪ್ರಭಾವದಿಂದಾಗಿ ಉರ್ದು, ಮರಾಠಿ ಮತ್ತು ಹಿಂದಿ ಮಿಶ್ರಿತ ವಿಶಿಷ್ಠವಾದ ಕನ್ನಡ. ಪ್ರಮುಖ ಆಹಾರ ಧಾನ್ಯ ಜೋಳ. ಜೊತೆಗೆ ಗೋಧಿ, ಅಕ್ಕಿ,ಮೆಕ್ಕೆ ಜೋಳ ಬೇಳೆಕಾಳುಗಳು. ಜವಾರಿ ಎಂದು ಗುರುತಿಸಲ್ಪಡುವ ವಿಶೇಷ ರುಚಿಯ ಕಾಯಿಪಲ್ಯ, ಸೊಪ್ಪುಗಳು ಹೆಸರುವಾಸಿ ಮತ್ತು ಸದಾಕಾಲವೂ ಲಭ್ಯ. ಜೋಳದ ರೊಟ್ಟಿ,, ಸೇಂಗಾ ಚಟ್ನಿ,, ಎಣ್ಣಿ ಬದನೆಯಕಾಯಿ ಪಲ್ಯ,, ಕೆನೆಮೊಸರು ಕರ್ನಾಟಕದ ಮೂಲೆಮೂಲೆಗಳಲ್ಲಿ ಪ್ರಸಿದ್ಧಿ ಪಡೆದಿವೆ.

ಕಲೆ ಮತ್ತು ಸಂಸ್ಕೃತಿ

ಉತ್ತರ ಕರ್ನಾಟಕದ ಊಟ

ಅಪ್ಪಟ ಉತ್ತರ ಕರ್ನಾಟಕ ಶೈಲಿಯ ಕಲೆಯನ್ನು ಒಳಗೊಂಡಿದೆ. ಪುರುಷರು ದೋತ್ರ, ನೆಹರು ಅಂಗಿ ಮತ್ತು ರೇಷ್ಮೆ ರುಮಾಲು(ಪಟಕ) ಧರಿಸುತ್ತಾರೆ.ಮಹಿಳೆಯರು ಇಲಕಲ್ಲ ಸೀರೆ ಮತ್ತು ಖಾದಿ ಬಟ್ಟೆಗಳನ್ನು ಧರಿಸುತ್ತಾರೆ.

ಧರ್ಮಗಳು

ಗ್ರಾಮದಲ್ಲಿ ಹಿಂದೂ ಮತ್ತು ಮುಸ್ಲಿಂ ಧರ್ಮದ ಜನರಿದ್ದಾರೆ.

ಭಾಷೆಗಳು

ಗ್ರಾಮದ ಪ್ರಮುಖ ಭಾಷೆ ಕನ್ನಡ. ಇದರೊಂದಿಗೆ ಹಿಂದಿ, ಮರಾಠಿ ಹಾಗೂ ಇಂಗ್ಲೀಷ್ ಭಾಷೆಗಳನ್ನು ಮಾತನಾಡುತ್ತಾರೆ.

ದೇವಾಲಯಗಳು

  • ಶ್ರೀ ಹಣಮಂತ(ಹಲಗಣೇಶ) ದೇವಾಲಯ
  • ಶ್ರೀ ಮಹಾಲಕ್ಷ್ಮಿ ದೇವಸ್ಥಾನ
  • ಶ್ರೀ ದುರ್ಗಾದೇವಿ ದೇವಲಯ
  • ಶ್ರೀ ಮಲ್ಲಿಕಾರ್ಜುನ ದೇವಾಲಯ
  • ಶ್ರೀ ಬಸವೇಶ್ವರ ದೇವಾಲಯ
  • ಶ್ರೀ ವೆಂಕಟೇಶ್ವರ ದೇವಾಲಯ
  • ಶ್ರೀ ಪಾಂಡುರಂಗ ದೇವಾಲಯ

ಮಸೀದಿಗಳು

ಮುಸ್ಲಿಂ ಸಮುದಾಯದ ದರ್ಗಾ ಹಾಗೂ ಮಸೀದಿ ಇದೆ.

ನೀರಾವರಿ

ಗ್ರಾಮದ ಪ್ರತಿಶತ ೯೦ ಭಾಗ ಭೂಮಿ ಕಾಲುವೆ, ತೆರದ ಬಾವಿ, ಕೊಳವೆ ಬಾವಿಯಿಂದ ನೀರಾವರಿ ಇದ್ದು ಪ್ರಮುಖವಾಗಿ ಕಬ್ಬು , ಮೆಕ್ಕೆಜೋಳ, ಜೋಳ, ಉಳ್ಳಾಗಡ್ಡಿ (ಈರುಳ್ಳಿ), ನಿಂಬೆಹಣ್ಣು , ಪಪ್ಪಾಯ, ಅರಿಶಿನ, ನೆಲಕಡಲೆ, ಶೇಂಗಾ(ಕಡಲೆಕಾಯಿ), ಸೂರ್ಯಕಾಂತಿ , ದ್ರಾಕ್ಷಿ , ದಾಳಿಂಬೆ, ಗೋಧಿ ಹಾಗೂ ಇತರೆ ಬೆಳೆಗಳನ್ನು ಬೆಳೆಯುತ್ತಾರೆ.

ಉದ್ಯೋಗ

ಗ್ರಾಮದಲ್ಲಿ ಫಲವತ್ತಾದ ಭೂಮಿ ಇದುವುದರಿಂದ ೭೦% ಜನಸಂಖ್ಯೆ ಕೃಷಿಯಲ್ಲಿ ನಿರತರಾಗಿದ್ದಾರೆ. ಕೃಷಿಯು ಗ್ರಾಮದ ಪ್ರಮುಖ ಉದ್ಯೋಗವಾಗಿದೆ. ಇದರೊಂದಿಗೆ ಹೈನುಗಾರಿಕೆ, ಕೋಳಿ ಸಾಕಾಣಿಕೆ, ದನಗಳ ಸಾಕಾಣಿಕೆ ಉಪ ಕಸುಬುಗಳಾಗಿವೆ.

ಬೆಳೆಗಳು

ಆಹಾರ ಬೆಳೆಗಳು

ಜೋಳ, ಗೋಧಿ, ಮೆಕ್ಕೆಜೋಳ, ಸಜ್ಜೆ , ಕಡಲೆ, ತೊಗರಿ, ಹೆಸರು ಮತ್ತು ಕಡಲೆ ಇತ್ಯಾದಿ

ವಾಣಿಜ್ಯ ಬೆಳೆಗಳು

ದ್ರಾಕ್ಷಿ, ಕಬ್ಬು, ದಾಳಿಂಬೆ, ನಿಂಬೆ, ಮಾವು, ಬಾಳೆ, ಸೂರ್ಯಕಾಂತಿ, ಅರಿಸಿಣ, ಪಪ್ಪಾಯಿ, ಕಲ್ಲಂಗಡಿ, ಉಳ್ಳಾಗಡ್ಡಿ (ಈರುಳ್ಳಿ) ಮತ್ತು ಶೇಂಗಾ(ಕಡಲೆಕಾಯಿ) ಇತ್ಯಾದಿ.

ತರಕಾರಿ ಬೆಳೆಗಳು

ಬದನೆಕಾಯಿ, ಟೊಮ್ಯಾಟೊ, ಹೀರೇಕಾಯಿ, ನುಗ್ಗೆಕಾಯಿ, ಗೆಣಸು, ಗಜ್ಜರಿ, ಮೆಣಸಿನಕಾಯಿ, ಸೌತೆಕಾಯಿ, ಮೊಲಂಗಿ, ಅವರಿಕಾಯಿ, ಪಡವಲಕಾಯಿ, ಕುಂಬಳಕಾಯಿ, ಮೆಂತೆ ಪಲ್ಲೆ ಮತ್ತು ಕೊತಂಬರಿ ಇತ್ಯಾದಿ.

ಹಬ್ಬಗಳು

ಪ್ರತಿವರ್ಷ ಶ್ರೀ ಪಾಂಡುರಂಗ ಸಪ್ತಾಹ(ದಿಂಡಿ), ಕಾರ ಹುಣ್ಣುಮೆ, ಯುಗಾದಿ, ದಸರಾ, ದೀಪಾವಳಿ, ನಾಗರ ಪಂಚಮಿ, ಉರಸು ಹಾಗೂ ಮೊಹರಮ್ ಹಬ್ಬಗಳನ್ನು ಆಚರಿಸುತ್ತಾರೆ.

ಶಿಕ್ಷಣ

  • ವಿದ್ಯಾನಿಧಿ ಕಿರಿಯ ಪ್ರಾಥಮಿಕ ಶಾಲೆ, ಹಲಗಣಿ
  • ವಿದ್ಯಾಭಾರತಿ ಕಿರಿಯ ಪ್ರಾಥಮಿಕ ಶಾಲೆ, ಹಲಗಣಿ
  • ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಹಲಗಣಿ
  • ಶ್ರೀ ಹಲಗಣೇಶ್ವರ ಪ್ರೌಢ ಶಾಲೆ, ಹಲಗಣಿ

ಸಾಕ್ಷರತೆ

ಗ್ರಾಮದ ಸಾಕ್ಷರತೆಯ ಪ್ರಮಾಣ ಸುಮಾರು ೬೭%. ಅದರಲ್ಲಿ ೭೫% ಪುರುಷರು ಹಾಗೂ ೫೫% ಮಹಿಳೆಯರು ಸಾಕ್ಷರತೆ ಹೊಂದಿದೆ.

ಅಂಚೆ ಕಚೇರಿ

  • ಅಂಚೆ ಕಚೇರಿ, ಹಲಗಣಿ

ಹಾಲು ಉತ್ಪಾದಕ ಸಹಕಾರಿ ಸಂಘ

  • ಹಾಲು ಉತ್ಪಾದಕ ಸಹಕಾರಿ ಸಂಘ, ಹಲಗಣಿ

ಗ್ರಾಮ ಪಂಚಾಯತಿ

  • ಗ್ರಾಮ ಪಂಚಾಯತಿ, ಹಲಗಣಿ

ರಾಜಕೀಯ

ಗ್ರಾಮವು ವಿಜಾಪುರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುತ್ತದೆ.

ಬ್ಯಾಂಕ್

  • ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್(ಮೈಕ್ರೊ ಬ್ರ್ಯಾಂಚ್), ಹಲಗಣಿ
  • ಶ್ರೀ ಹಲಗಣೇಶ ವಿವಿಧೋದ್ದೇಶಗಳ ಸೌಹಾರ್ದ ಬ್ಯಾಂಕ್, ಹಲಗಣಿ
"https://kn.wikipedia.org/w/index.php?title=ಹಲಗಣಿ&oldid=805875" ಇಂದ ಪಡೆಯಲ್ಪಟ್ಟಿದೆ