ಹಕ್ಕಿ ಜ್ವರ: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
references added
೯ ನೇ ಸಾಲು: ೯ ನೇ ಸಾಲು:


== ವೈರಸ್ ==
== ವೈರಸ್ ==
ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು [[ಉಸಿರು]] ರೋಗಾಣುಗಳಿಂದ (ವೈರಸ್) ತುಂಬಿರುತ್ತದೆ.<ref name="pv"/> ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. <ref name="pv"/> ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ.<ref name="pv"/> ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ.<ref>http://www.prajavani.net/article/ ಹಕ್ಕಿ-ಜ್ವರ-ಇರಲಿ-ಮುನ್ನೆಚ್ಚರ</ref> ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ.<ref name="pv"/>ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.
ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು [[ಉಸಿರು]] ರೋಗಾಣುಗಳಿಂದ (ವೈರಸ್) ತುಂಬಿರುತ್ತದೆ.<ref name="pv"/> ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. <ref name="pv"/> ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ.<ref name="pv"/> ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ.<ref name="pv"/> ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ.<ref name="pv"/>ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.





೨೨:೪೬, ೨೯ ಜೂನ್ ೨೦೧೮ ನಂತೆ ಪರಿಷ್ಕರಣೆ

ವೈಜ್ಞಾನಿಕವಾಗಿ ಹಕ್ಕಿ ಜ್ವರವನ್ನು ಹಕ್ಕಿ ಇನ್‌ಫ್ಲೂಯೆನ್‌ಜ ಅಥವಾ ಬರ್ಡ್ ಫ್ಲೂ ಎನ್ನುತ್ತಾರೆ. [೧]ಈ ಸೋಂಕಿಗೆ ಮುಖ್ಯ ಕಾರಣ ಎಚ್5ಎನ್೧ ಎಂಬ ಹೆಸರಿನ ವೈರಸ್. ಇದೊಂದು ತೀವ್ರ ಸಾಂಕ್ರಾಮಿಕ ಪಿಡುಗು.[೧] ೨೦೦೫-೨೦೦೬ ರಲ್ಲಿ ಈ ಎಚ್೫ಎನ್೧ ರೋಗಾಣು ಇಲ್ಲಿಯವರೆಗೂ ಏಶಿಯಾ, ಯೂರೋಪ್ ಮತ್ತು ಆಫ್ರಿಕಾ ಪ್ರದೇಶಗಳಲ್ಲಿ ಸುಮಾರು ೪೦೦ ಜನರನ್ನು ಬಲಿ ತೆಗೆದುಕೊಂಡು ಲಕ್ಷಾಂತರ ಜನರನ್ನು ರೋಗಗ್ರಸ್ಥನ್ನಾಗಿ ಮಾಡಿತ್ತು.[೨] ಇದು ತೀವ್ರ ಸಾಂಕ್ರಾಮಿಕ ಮತ್ತು ಮನುಷ್ಯರಿಗೆ ಮಾರಕ ಎನ್ನಲಾಗಿದೆ. [೩]

ಪ್ರಥಮ ಪ್ರಕರಣ

ಮಾನವನಿಗೆ ಈ ಕಾಯಿಲೆ ಹತ್ತಿದ ಪ್ರಪ್ರಥಮ ಪ್ರಕರಣ 1997ರಲ್ಲಿ ಹಾಂಕಾಂಗ್‌ನಲ್ಲಿ ವರದಿಯಾಗಿದೆ. ಆಗ ಅಲ್ಲಿ 18 ಜನರಿಗೆ ಕಾಯಿಲೆ ತಗುಲಿದ್ದು, ಅದರಲ್ಲಿ ಆರು ಜನ ಬಲಿಯಾಗಿದ್ದರು.[೧] 2008ರ ಮಾರ್ಚ್‌ವರೆಗೆ 48 ದೇಶಗಳಲ್ಲಿ 372 ಜನರಿಗೆ ಹಕ್ಕಿ ಜ್ವರ ತಗುಲಿದೆ. ಅವರಲ್ಲಿ 235 ಮಂದಿ ಸಾವಿಗೀಡಾಗಿದ್ದಾರೆ. [೧]

ವೈರಸ್

ಸೋಂಕಿಗೆ ಒಳಗಾದ ಹಕ್ಕಿಯ ಮಲ, ಮೂತ್ರ, ಸಿಂಬಳ ಮತ್ತು ಉಸಿರು ರೋಗಾಣುಗಳಿಂದ (ವೈರಸ್) ತುಂಬಿರುತ್ತದೆ.[೧] ಹಕ್ಕಿ ವಾಸಿಸುವ ಸ್ಥಳ, ಅಲ್ಲಿನ ಗಾಳಿ, ಸಾಕಣೆಗೆ ಬಳಸುವ ಉಪಕರಣ ಎಲ್ಲವೂ ವೈರಸ್‌ಮಯವಾಗಿರುತ್ತವೆ. [೧] ಅತಿ ಅಪರೂಪವಾಗಿ ಪಕ್ಷಿಗಳ ಕಾಯಿಲೆ ಮಾನವನಿಗೆ ಅಂಟುವುದೂ ಇದೆ. ಹೀಗಾಗಿ ಕೋಳಿ ಫಾರಂನಲ್ಲಿ ಕೆಲಸ ಮಾಡುವವರು, ಕೋಳಿ ಸಾಕಿರುವ ಮನೆಯವರು ಹಕ್ಕಿ ಜ್ವರಕ್ಕೆ ಸೆರೆಯಾಗುತ್ತಾರೆ.[೧] ಪಕ್ಷಿಗಳನ್ನು, ಮೊಟ್ಟೆಯನ್ನು ಮಾರುವವರಿಗೂ, ಕತ್ತರಿಸುವವರಿಗೂ, ಕೋಳಿ ಮಾಂಸದ ಅಡುಗೆ ಮಾಡುವವರಿಗೂ ಹಕ್ಕಿ ಜ್ವರ ಅಂಟುವ ಸಂಭವ ಇರುತ್ತದೆ.[೧] ರೋಗಾಣುಗಳು ಮುಖ್ಯವಾಗಿ ಉಸಿರಾಡುವ ಗಾಳಿಯೊಂದಿಗೆ ಮಾನವನ ದೇಹ ಸೇರುತ್ತವೆ. ಮನುಷ್ಯನಿಗೆ ಅಂಟಿದ ಸೋಂಕು ಮತ್ತೊಬ್ಬರಿಗೆ ಅಂಟುವುದಿಲ್ಲ.[೧]ಹಾಗೇನಾದರೂ ಆಗಿದ್ದರೆ ಸೋಂಕು ಅತ್ಯಂತ ತೀವ್ರಗತಿಯಲ್ಲಿ ಹರಡಿ ಮನುಷ್ಯರ ಮಾರಣಹೋಮವೇ ನಡೆದುಹೋಗುತ್ತಿತ್ತು.


"ಏವಿಯನ್ ಇನ್‌ಫ್ಲೂಯೆನ್ಸಾ ಎಂದು ಕರೆಯುವ ವೈರಸ್‌ನಿಂದ ಈ ರೋಗ ಹಕ್ಕಿಗಳಲ್ಲಿ, ಅದರಲ್ಲೂ ವಿಶೇಷವಾಗಿ ಫಾರಂಕೋಳಿಗಳಲ್ಲಿ ಹರಡುತ್ತದೆ. ಗಾಳಿ ಮೂಲಕ ಹರಡುವ ಈ ವೈರಸ್‌ಗಳು ಕುಕ್ಕುಟ ಪಾಲನೆಯಲ್ಲಿ ನಿರತರಾದ ಸಿಬ್ಬಂದಿಯಲ್ಲೂ ಕಾಣಿಸಿಕೊಳ್ಳಬಹುದು. ಹಕ್ಕಿಗಳಿಂದ ಹಕ್ಕಿಗಳಿಗೆ ಹಾಗೂ ಹಕ್ಕಿಗಳಿಂದ ಮನುಷ್ಯರಿಗೆ ಇದು ಹರಡಬಹುದು. ಆದರೆ ಮನುಷ್ಯರಿಂದ ಮನುಷ್ಯರಿಗೆ ಹಕ್ಕಿ ಜ್ವರದ ಸೋಂಕು ಹರಡಿದ ಉದಾಹರಣೆಗಳು ಇಲ್ಲ. ಹೀಗಾಗಿ ಹೆಚ್ಚಿನ ಆತಂಕ ಇಲ್ಲ. ಆದರೆ ಮುಂದಿನ ದಿನಗಳಲ್ಲಿ ವೈರಸ್‌ಗಳು ಮನುಷ್ಯ ದೇಹಕ್ಕೆ ವರ್ಗಾವಣೆಗೊಂಡು ಬದುಕುಳಿಯುವ ಶಕ್ತಿ ಬೆಳೆಸಿಕೊಳ್ಳಬಹುದು. ಮೊಟ್ಟೆ ಮತ್ತು ಕೋಳಿ ಮಾಂಸವನ್ನು ಚೆನ್ನಾಗಿ ಕುದಿಸುವುದರಿಂದಲೂ ವೈರಸ್‌ಗಳು ಸಾಯುತ್ತವೆ. ಹೀಗಾಗಿ ಮಾಂಸಾಹಾರಿಗಳು ಮತ್ತು ಕುಕ್ಕುಟ ಉದ್ಯಮ ಅತಂಕಕ್ಕೆ ಒಳಗಾಗಬೇಕಾಗಿಲ್ಲ", ಎನ್ನುತ್ತಾರೆ ಹಾಸನ ಪಶುವೈದ್ಯ ಕಾಲೇಜಿನ ಸಹ ಪ್ರಾಧ್ಯಾಪಕ ಸುಶಾಂತ್ ಹಂಡಿಗೆ[೪]

"ಕೋಳಿ ಮಾಂಸದ ಸೇವನೆಯಿಂದ ಹಕ್ಕಿ ಜ್ವರ ಬರುವುದಿಲ್ಲ. ಕೋಳಿ ಮಾಂಸ ಅಥವಾ ಮೊಟ್ಟೆಗಳನ್ನು ಸೇವಿಸುವುದರಿಂದ ಈ ಖಾಯಿಲೆ ಮನುಷ್ಯರಲ್ಲಿ ಬರುವುದಿಲ್ಲ. ಆದರೆ ಸೋಂಕು ತಗುಲಿದ ಕೋಳಿಯ ಮಾಂಸ ಚೆನ್ನಾಗಿ ಬೇಯಿಸದೆ ಹಾಗೂ ಅವುಗಳ ಹಸಿ ಮೊಟ್ಟೆಯ ಸೇವನೆಯಿಂದ ರೋಗ ತಗಲುವ ಸಾಧ್ಯತೆಗಳಿರುತ್ತವೆ. ಕೋಳಿ ಮಾಂಸ ಮತ್ತು ಮೊಟ್ಟೆಯನ್ನು 70 ಡಿಗ್ರಿ ಸೆಂಟಿಗ್ರೇಡ್‌ಗೂ ಅಧಿಕ ಉಷ್ಣಾಂಶದಲ್ಲಿ ಬೇಯಿಸಿದ ನಂತರ ಸೇವಿಸಬೇಕು" ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಮಕಷ್ಣರಾವ್ ಹಾಗೂ ಪಶು ಪಾಲನೆ ಮತ್ತು ಪಶು ವೈದ್ಯ ಇಲಾಖೆ ಉಪನಿರ್ದೇಶಕರಾದ ಡಾ.ಟಿ. ತಿಪ್ಪೇಸ್ವಾಮಿ ಅವರು ತಿಳಿಸಿದ್ದಾರೆ.[೫]

ಮುಂಜಾಗ್ರತೆ ಉಪಾಯ

•ಯಾವುದೇ ಹಕ್ಕಿಗೆ ಜ್ವರ ಕಂಡರೆ ತಕ್ಷಣ ಸುತ್ತಮುತ್ತಲಿನ ಹಕ್ಕಿಗಳನ್ನೆಲ್ಲ (ಕೋಳಿ) ಹತ್ಯೆ ಮಾಡಬೇಕು[೧] •ಹಕ್ಕಿ ಜ್ವರದ ವೈರಸ್‌ಗಳನ್ನು ಅವುಗಳ ಸಿಂಬಳ, ಮಲ, ಮೂತ್ರ ಇತ್ಯಾದಿಗಳನ್ನು ಭೋಪಾಲದಲ್ಲಿರುವ ಪ್ರಯೋಗಾಲಯದಲ್ಲಿ ಪತ್ತೆ ಮಾಡಲಾಗುತ್ತದೆ[೧] •ಹಕ್ಕಿ ಜ್ವರ ಕಂಡುಬಂದ ಸ್ಥಳಕ್ಕೆ ಭೇಟಿ ನೀಡುವವರು ತಮಗೆ ಕಾಯಿಲೆ ಬರದಂತೆ ತಡೆಯಲು ದಿನಕ್ಕೊಂದರಂತೆ ಏಳು ದಿನ `ಟ್ಯಾಮಿಫ್ಲೂ~ ಮಾತ್ರೆ ಸೇವಿಸ ಬೇಕಾಗುತ್ತದೆ[೧] •ಕೋಳಿ ಸಾಕುವವರಿಗೆ ಹಕ್ಕಿ ಜ್ವರದ ಬಗ್ಗೆ ತಿಳಿವಳಿಕೆ ಮೂಡಿಸಬೇಕು. •ಹಕ್ಕಿ ಸಾಕುವ ಸ್ಥಳದಲ್ಲಿ ಸ್ವಚ್ಛತೆಯನ್ನು ಕಾಪಾಡಬೇಕು. •ಹಕ್ಕಿ ಜ್ವರದಿಂದ ಸತ್ತ ಕೋಳಿಯನ್ನು ಐದಾರು ಪದರ ಸುಣ್ಣ ಹಾಗೂ ಮಣ್ಣು ಹಾಕಿ ಹೂಳಬೇಕು ಅಥವಾ ಸುಟ್ಟುಹಾಕಬೇಕು.[೧] •ಹಕ್ಕಿ ಜ್ವರ ಕಂಡುಬಂದ ಸಮಯದಲ್ಲಿ ಯಾರಿಗಾದರೂ ಅತಿಯಾದ ಜ್ವರ, ಉಸಿರಾಟದ ತೊಂದರೆ ಕಂಡರೆ ಅಲಕ್ಷಿಸದೆ ಅವರನ್ನು ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಬೇಕು. •ಯಾವುದೇ ದೇಶವಾಗಲಿ ಹಕ್ಕಿ ಜ್ವರದ ಬಗ್ಗೆ ಕಣ್ಗಾವಲಿಡಬೇಕು ಮತ್ತು ಕಾಯಿಲೆ ಹತ್ತಿಕ್ಕಲು ಸಿದ್ಧತೆಗಳನ್ನು ಮಾಡಿಕೊಂಡಿರಬೇಕು.

ಲಕ್ಷಣಗಳು ಹೀಗಿರುತ್ತವೆ[೧]

ಹಕ್ಕಿ ಜ್ವರದ ಸೋಂಕಿಗೆ ಒಳಗಾಗುವ ವ್ಯಕ್ತಿಗಳಲ್ಲಿ 2-3 ದಿನದಲ್ಲಿ ರೋಗ ಲಕ್ಷಣಗಳು ಪ್ರಕಟವಾಗುತ್ತವೆ. ಅತಿಯಾದ ಜ್ವರ, ಕೆಮ್ಮು, ತಲೆನೋವು, ಉಸಿರಾಡಲು ತೊಂದರೆಯಾಗುವುದು ಕಾಯಿಲೆಯ ಲಕ್ಷಣಗಳು. ಎಕ್ಸ್‌ರೇ ಪರೀಕ್ಷೆಯಿಂದ ಎದೆಯಲ್ಲಿ ಉಂಟಾಗಿರುವ ಬದಲಾವಣೆಗಳು ಎದ್ದು ಕಾಣುತ್ತವೆ. ಹಕ್ಕಿ ಜ್ವರದಿಂದ ಸಾವುಂಟಾಗುವುದು ಉಸಿರಾಟ ನಿಲ್ಲುವುದರಿಂದ. ರೋಗಿಯ ಮೂಗು ಮತ್ತು ಗಂಟಲಿನ ದ್ರವವನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೊಳಪಡಿಸಿ ರೋಗ ಅಂಟಿರುವುದನ್ನು ದೃಢಪಡಿಸಿಕೊಳ್ಳಬಹುದು.

ಟ್ಯಾಮಿಫ್ಲೂ ಮತ್ತು ರಿಲಿಂಜ್ ಎಂಬ ಔಷಧಿಗಳು ಉತ್ತಮ ಫಲಿತಾಂಶವನ್ನು ನೀಡುತ್ತವೆ.[೧] ಆದಾಗ್ಯೂ ಕಾಯಿಲೆ ಆರಂಭಗೊಂಡ 48 ಗಂಟೆಗಳೊಳಗೆ ಔಷಧಿ ಸೇವನೆ ಪ್ರಾರಂಭಿಸಿದರೆ ರೋಗದ ತೀವ್ರತೆ ಬಹಳಷ್ಟು ಕಡಿಮೆಯಾಗುತ್ತದೆ.ಟ್ಯಾಮಿಫ್ಲೂ ಹಾಗೂ ರಿಲಿಂಜ್ ಮಾತ್ರೆಗಳು ಸುಲಭವಾಗಿ, ಸುಲಭದ ದರದಲ್ಲಿ ದೊರೆಯುವುದಿಲ್ಲ. ಹೀಗಾಗಿ ವಿಶ್ವ ಆರೋಗ್ಯ ಸಂಸ್ಥೆ ಸದಾ 3 ದಶಲಕ್ಷ ಜನರಿಗೆ ಆಗುವಷ್ಟು ಔಷಧಿಗಳನ್ನು ಸಂಗ್ರಹಿಸಿ ಇಟ್ಟುಕೊಂಡಿರುತ್ತದೆ ಮತ್ತು ಅವಶ್ಯ ಬೀಳುವ ದೇಶಗಳಿಗೆ ತುರ್ತಾಗಿ ರವಾನಿಸುತ್ತದೆ.

ಉಲ್ಲೇಖಗಳು