ವಿಕಿಪೀಡಿಯ:ವಿಶೇಷ ಬರಹ/ಸಂಚಿಕೆ - ೫೨: ಪರಿಷ್ಕರಣೆಗಳ ನಡುವಿನ ವ್ಯತ್ಯಾಸ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ
Content deleted Content added
/ for main page /
( ಯಾವುದೇ ವ್ಯತ್ಯಾಸವಿಲ್ಲ )

೧೪:೫೯, ೬ ಏಪ್ರಿಲ್ ೨೦೦೯ ನಂತೆ ಪರಿಷ್ಕರಣೆ

ಚಿನ್ನದ ಬಣ್ಣದ ಹುಲಿ

ಹುಲಿ ( ವೈಜ್ಞಾನಿಕ ಹೆಸರು ಪ್ಯಾಂಥೆರಾ ಟೈಗ್ರಿಸ್ ) ಪ್ರಾಣಿಶಾಸ್ತ್ರದ ಪ್ರಕಾರ ಫೆಲಿಡೇ ಕುಟುಂಬಕ್ಕೆ ಸೇರಿದ ಒಂದು ಜೀವಿ. ಪ್ಯಾಂಥೆರಾ ವಂಶಕ್ಕೆ ಸೇರಿದ ೪ ದೊಡ್ಡ ಬೆಕ್ಕುಗಳ ಪೈಕಿ ಹುಲಿ ಅತ್ಯಂತ ದೊಡ್ಡ ಪ್ರಾಣಿ. ದಕ್ಷಿಣ ಮತ್ತು ಪೂರ್ವ ಏಷ್ಯಾಗಳಲ್ಲಿ ವ್ಯಾಪಕವಾಗಿ ಕಾಣಬರುವ ಹುಲಿ ತನ್ನ ಆಹಾರವನ್ನು ಬೇಟೆಯಾಡಿ ಮಾಂಸ ಸಂಪಾದಿಸುವ ಪ್ರಾಣಿಗಳ ಗುಂಪಿಗೆ ಸೇರಿದೆ. ಹುಲಿಯು ೪ ಮೀ. ವರಗೆ (೧೩ ಅಡಿ) ಉದ್ದವನ್ನು ಹಾಗೂ ೩೦೦ ಕಿ.ಗ್ರಾಂ ವರೆಗೆ ತೂಕವನ್ನು ಹೊಂದಬಹುದು. ದೊಡ್ಡ ದೇಹ ಮತ್ತು ಅಪಾರ ಬಲ ಹೊಂದಿರುವ ಹುಲಿಯ ಕಣ್ಸೆಳೆಯುವ ಲಕ್ಷಣವೆಂದರೆ ಬಿಳೀ ಅಥವಾ ಹಳದಿ ಯಾ ಕೇಸರಿ ಬಣ್ಣದ ಮೈ ಮೇಲೆ ನೀಳವಾಗಿ ಮೇಲಿನಿಂದ ಕೆಳಗೆ ಇರುವ ಗಾಢ ಬಣ್ಣದ ಪಟ್ಟೆಗಳು. ಸಾಮಾನ್ಯವಾಗಿ ಹುಲಿಯ ದೇಹದ ಅಡಿಯ ಭಾಗ ತೆಳು ಬಣ್ಣದ್ದಾಗಿರುತ್ತದೆ. ಹುಲಿಗಳ ಜಾತಿಗಳ ಪೈಕಿ ಸೈಬೀರಿಯಾದ ಹುಲಿ ಅತ್ಯಂತ ದೊಡ್ಡ ಕಾಯವನ್ನು ಹೊಂದಿರುತ್ತದೆ. ಪ್ರಕೃತಿಯೊಂದಿಗೆ ಸುಲಭವಾಗಿ ಹೊಂದಾಣಿಕೆ ಮಾಡಿಕೊಂಡು ಜೀವಿಸುವ ಹುಲಿಗಳು ಸೈಬೀರಿಯಾದ ಟೈಗಾ ಕಾಡುಗಳಲ್ಲಿ, ತೆರೆದ ಹುಲ್ಲುಗಾವಲುಗಳಲ್ಲಿ ಮತ್ತು ಉಷ್ಣವಲಯದ ಕಾಡುಗಳಲ್ಲಿ ನೆಲೆಸಿವೆ. ಇಂದಿನ ಯುಗದ ಹುಲಿಗಳ ೮ ಉಪತಳಿಗಳ ಪೈಕಿ ೨ ಈಗಾಗಲೇ ನಶಿಸಿಹೋಗಿದ್ದು ಉಳಿದ ೬ ತೀವ್ರ ಅಪಾಯದಲ್ಲಿರುವ ಜೀವತಳಿಗಳೆಂದು ಗುರುತಿಸಲ್ಪಟ್ಟಿವೆ. ತನ್ನ ಆಕರ್ಷಕ ರೂಪ, ಬಲ ಮತ್ತು ಸಾಹಸಪ್ರವೃತ್ತಿಗಳಿಂದಾಗಿ ಹುಲಿ ವನ್ಯಜೀವಿಗಳ ಪೈಕಿ ಮಾನವನಿಂದ ಅತಿ ಹೆಚ್ಚು ಗೌರವಿಸಲ್ಪಟ್ಟಿದೆ. ಹುಲಿಯ ಅನೇಕ ಧ್ವಜಗಳಲ್ಲಿ ಕಾಣಬರುತ್ತದೆ. ಅಲ್ಲದೆ ಏಷ್ಯಾದ ಹಲವು ರಾಷ್ಟ್ರಗಳ ರಾಷ್ಟ್ರೀಯ ಪ್ರಾಣಿ ಎಂಬ ಸ್ಥಾನವನ್ನು ಸಹ ಪಡೆದಿದೆ.