ಅಬ್ಬಿ ಜಲಪಾತ

ವಿಕಿಪೀಡಿಯದಿಂದ, ಇದು ಮುಕ್ತ ಹಾಗೂ ಸ್ವತಂತ್ರ ವಿಶ್ವಕೋಶ

ಕಾವೇರಿ ಹುಟ್ಟುವುದು ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಬ್ರಹ್ಮಗಿರಿ ಬೆಟ್ಟಶ್ರೇಣಿಯಲ್ಲಿ. ಈ ಪವಿತ್ರ ಪುಣ್ಯಕ್ಷೇತ್ರಕ್ಕೆ ತಲಕಾವೇರಿ ಎಂಬ ನಾಮಧೇಯ. ಇಲ್ಲಿ ಅಗಸ್ತ್ಯೇಶ್ವರ ದೇವಾಲಯ, ಗಣಪತಿ ದೇವಾಲಯ ಇದೆ. ಅಗಸ್ತ್ಯ ಮಹಾಮುನಿಗಳು ಈ ಲಿಂಗವನ್ನು ಸ್ಥಾಪಿಸಿದರು ಎಂಬುದು ಪ್ರತೀತಿ. ತಲಕಾವೇರಿಯ ಈ ದೇಗುಲಗಳ ತಗ್ಗಿನಲ್ಲಿ ಕಾವೇರಿ ಉಗಮವಾಗುವ ಚಚ್ಚೌಕದ ಚಿಕ್ಕ ಕೊಳವಿದೆ. ಅದರ ಮುಂದೆ ಸ್ನಾನಘಟ್ಟ. ಇಲ್ಲಿಯೇ ಕಾವೇರಿ ಹುಟ್ಟುವುದು.ಈ ಸ್ಥಳಕ್ಕೆ ಕುಂಡಿಗೆ ಎನ್ನುತ್ತಾರೆ. ತುಲಾಸಂಕ್ರಮಣದ ನಿಶ್ಚಿತವಾದ ದಿನ ಇಲ್ಲಿ ಕಾವೇರಿ ತೀರ್ಥೋದ್ಭವವಾಗುತ್ತದೆ. ಪ್ರತಿ ವರ್ಷ ತುಲಾ ಮಾಸದ ಸಂಕ್ರಮಣದಿಂದ ವೃಶ್ಚಿಕ ಮಾಸದ ಸಂಕ್ರಮದವರೆಗೆ ಇಲ್ಲಿ ಕಾವೇರಿ ಜಾತ್ರೆ ನಡೆಯುತ್ತದೆ. ತಮಿಳುನಾಡು, ಕೇರಳ, ಪಾಂಡಿಚೇರಿ, ಕರ್ನಾಟಕಹಾಸನ, ಕೊಡಗು, ಮಂಡ್ಯ ಜಿಲ್ಲೆಗಳಿಂದ ಇಲ್ಲಿಗೆ ಭಕ್ತರು ಆಗಮಿಸುತ್ತಾರೆ. ಕೊಳದಲ್ಲಿ ಮಿಂದು ಕುಂಡಿಗೆಯ ತೀರ್ಥ ಕುಡಿದು, ಪ್ಲಾಸ್ಟಿಕ್ ಕ್ಯಾನ್‌ಗಳಲ್ಲಿ ತುಂಬಿಕೊಂಡು ಮನೆಗೆ ಹೋಗುತ್ತಾರೆ. ಇದು ಪೌರಾಣಿಕ ಸ್ಥಳ, ಜೀವ ನದಿ ಹುಟ್ಟುವ ಜನ್ಮಸ್ಥಳ ಹೀಗಾಗಿ ಇದು ಭಕ್ತರಿಗೆ ಪುಣ್ಯ ಕ್ಷೇತ್ರ. ಪ್ರವಾಸಿಗರಿಗೆ ರಮ್ಯಕ್ಷೇತ್ರ. ಶೀತ ಮಾರುತಗಳಿಂದ, ಶೀತಹವೆಯಿಂದ ಕೂಡಿರುವ ಈ ಸ್ಥಳ ರಮಣೀಯ. ಬ್ರಹ್ಮಗಿರಿಯ ಶಿಖರವೇರಿದಾಗ ಕಾಣುವ ಆಕಾಶಶುಭ್ರವಾಗಿರುವ ಬೆಟ್ಟದಪುರದ ನೋಟ ಮನೋಹರ. ಇಲ್ಲಿ ನಿಂತು ನೋಡಿದರೆ, ಹಾವಿನಂತೆ ಹರಿಯುವ ನದಿಗಳನ್ನೂ, ದೂರದಲ್ಲಿ ಅರಬ್ಬಿ ಸಮುದ್ರದ ರುದ್ರರಮಣೀಯ ಪ್ರಕೃತಿ ಸಿರಿಯನ್ನೂ ಕಣ್ತುಂಬಿಕೊಳ್ಳಬಹುದು. ಹತ್ತಿರದಲ್ಲೇ ಇರುವ ಅಬ್ಬಿ ಜಲಪಾತಕ್ಕೆ ಹೋಗಿ ಆನಂದಿಸಬಹುದು. ಅಬ್ಬೆ ಜಲಪಾತ : ಕಾವೇರಿ ಜಲಾನಯನ ಪ್ರದೇಶಗಳಲ್ಲಿ, ಭಾಗಮಂಡಲದ ಸುತ್ತ ಮುತ್ತ ಮಳೆ ಸುರಿಯುತ್ತಿದ್ದಾಗ ಕನ್ನಡ ನಾಡಿನ ಜೀವನದಿ ಕಾವೇರಿ ಉಕ್ಕಿ ಹರಿಯುತ್ತದೆ. ಕೊಡಗಿನ ರಮಣೀಯ ಹಸಿರು ರಾಶಿಯ ಮೇಲೆ ಮಳೆಯ ಹನಿಗಳು ಬೀಳುತ್ತಿದ್ದಂತೆಯೇ ಇಲ್ಲಿನ ವಿಖ್ಯಾತ ಜಲಪಾತ ‘ಅಬ್ಬೆ’ ಮೈದುಂಬಿ ಧುಮ್ಮುಕ್ಕುತ್ತದೆ. ಹಾಲು ನೊರೆಯಂತೆ ಆಕರ್ಷಕವಾಗಿ ಧುಮ್ಮಿಕ್ಕುವ ಅಬ್ಬಿ, ತನ್ನ ಪೂರ್ಣ ಸೊಬಗನ್ನು ಪಡೆವುದೇ ಮಳೆಗಾಲದಲ್ಲಿ. ಹೀಗಾಗೆ ಅಬ್ಬಿಗೆ ಮಳೆಗಾಲದ ಮದುಮಗಳು ಎಂಬ ಹೆಸರೂ ಇದೆ. ರಭಸದಿಂದ ಭೋರ್ಗರೆವ ಅಬ್ಬಿಯ ಆರ್ಭಟ ಮಳೆಗಾಲದಲ್ಲಿ ಅರ್ಧ ಕಿಲೋ ಮೀಟರ್ ದೂರ ಕೇಳುತ್ತದೆ. ಬಂಡೆಗಳ ಮೇಲಿಂದ ಧುಮ್ಮಿಕ್ಕುವ ಅಬ್ಬಿಯ ಜಲಪಾತ ಹಾಲು ನೊರೆಯಂತಹ ರಮಣೀಯ ದೃಶ್ಯದೊಂದಿಗೆ ಮತ್ತಷ್ಟು ಕಳೆಗಟ್ಟುತ್ತದೆ. ನೋಡುಗರಿಗೆ ಅಮಿತಾನಂದವನ್ನು ನೀಡುತ್ತದೆ. ಇಲ್ಲಿರುವ ತೂಗುಯ್ಯಾಲೆಯ ಮೇಲೆ ಮಳೆಯಲ್ಲಿ ತೋಯುತ್ತಾ, ಅತ್ತಿಂದಿತ್ತ, ಇತ್ತಿಂದತ್ತ ಓಲಾಡುತ್ತಾ ಸಾಗಿದರೆ, ಧುಮ್ಮಿಕ್ಕುವ ಭೋರ್ಗರೆಯುತ್ತಾ ಧುಮ್ಮಿಕ್ಕುವ ಅಬ್ಬಿಯ ಜಲಹನಿಗಳೂ ನಿಮಗೆ ಪನ್ನೀರ ಎರಚುತ್ತಾ ಸ್ವಾಗತ ಕೋರುತ್ತವೆ. ಬೇಸಿಗೆಯಲ್ಲಿ ಒಣಗಿ ತನ್ನ ಸೊಬಗನ್ನು ಕಳೆದುಕೊಳ್ಳುವ ಮನೋಹರವಾದ ಅಬ್ಬಿ ಜಲಪಾತದ ಸೊಬಗನ್ನು ಸವಿಯಲು ಮಳೆಗಾಲವೇ ಸೂಕ್ತ. ಪ್ರವಾಸ ಮಾರ್ಗದರ್ಶಿ : ಬೆಂಗಳೂರಿನಿಂದ ೨೫೨ ಕಿಲೋಮೀಟರ್ ದೂರದಲ್ಲಿರುವ ಮಡಿಕೇರಿಗೆ ರಾಜ್ಯದ ಎಲ್ಲ ಪ್ರಮುಖ ಪಟ್ಟಣಗಳಿಂದ ನೇರ ಬಸ್ ಸೌಲಭ್ಯ ಇದೆ. ಮಡಿಕೇರಿಯಿಂದ ಅಬ್ಬಿ ಜಲಪಾತಕ್ಕೆ ಕೇವಲ 10 ಕಿಲೋ ಮೀಟರ್. ಮಡಿಕೇರಿಯಲ್ಲಿ ಮೊದಲು ಮಡಿಕೇರಿ ಕೋಟೆ ನೋಡಿ, ಅಲ್ಲಿಂದ ಅಬ್ಬಿಗೆ ಬರಬಹುದು. ಮಡಿಕೇರಿಯಿಂದ ಭಾಗಮಂಡಲಕ್ಕೆ ೩೯ ಕಿ.ಮೀಟರ್. ಕಾವೇರಿ, ಕನ್ನಿಕ ಹಾಗೂ ಸುಜ್ಯೋತಿ ನದಿಗಳು ಸೇರುವ ಈ ಸ್ಥಳದಲ್ಲಿ ಸುಂದರ ದೇವಾಲಯವಿದೆ. ಹತ್ತಿರದಲ್ಲೇ ಕನ್ನಡ ನಾಡಿನ ಜೀವನದಿ ಕಾವೇರಿಯ ಉಗಮಸ್ಥಾನ ತಲಕಾವೇರಿಯೂ ಇದೆ. (ಮಡಿಕೇರಿಯಿಂದ ತಲಕಾವೇರಿಗೆ ೪೪ ಕಿ.ಮೀಟರ್). ಮಡಿಕೇರಿಯಿಂದ ನಿಸರ್ಗಧಾಮಕ್ಕೆ ೨೫ ಕಿ.ಮೀ ಹಾಗೂ ಹಾರಂಗಿ ಜಲಾಶಯಕ್ಕೆ ೩೬ ಕಿ.ಮೀ. ಮಾತ್ರ.

ಅಬ್ಬಿ ಜಲಪಾತ, ಮಡಿಕೇರಿ
Abbey Falls
Abbey Falls
Falling water Abbi falls

ಅಬ್ಬಿ ಜಲಪಾತವು ಕೊಡಗು ಜಿಲ್ಲೆಯ ಮುಖ್ಯ ಪಟ್ಟಣವಾದ ಮಡಿಕೇರಿಯಿಂದ ಕೇವಲ 7-8 ಕಿ.ಮೀ. ದೂರದಲ್ಲಿದೆ.[೧] ಮಡಿಕೇರಿಯವರೆಗೆ ಬಸ್ ಸೌಕರ್ಯವಿದ್ದು ಅಲ್ಲಿಂದ ೫ ಕಿ.ಮೀ. ಯಾವುದೇ ಸ್ಥಳೀಯ ಖಾಸಗಿ ವಾಹನವನ್ನು ಹಿಡಿದು ಹೋಗಬಹುದು.ನಂತರ ಸುಮಾರು ೫೦೦ ಮೀ ನಷ್ಟು ಕಾಫಿ ತೋಟದ ಮಧ್ಯೆ ನಡೆದುಕೊಂಡು ಹೋದರೆ ಈ ಸುಂದರವಾದ ಜಲಪಾತ ಕಾಣಸಿಗುತ್ತದೆ. ಮಳೆಗಾಲದ ನಂತರದ ಅವಧಿಯಲ್ಲಿ ಹೋದರೆ ೧೦೭ ಅಡಿ ಎತ್ತರದಿಂದ ಮೈದುಂಬಿಕೊಂಡು ಧುಮುಕುವ ಜಲಪಾತದ ವೈಭವವನ್ನು ಸವಿಯಬಹುದು.[೨] ಸುತ್ತಮುತ್ತಲು ದಟ್ಟವಾದ ಕಾಡು, ಕಾಫಿ ತೋಟದ ಮಧ್ಯೆ ಹಾಲಿನ ನೊರೆಯಂತೆ 30ರಿಂದ 40 ಅಡಿ ಎತ್ತರದ ಬೆಟ್ಟದಿಂದ ಧುಮ್ಮಿಕ್ಕುವ ನೀರನ್ನು ನೋಡುವುದೇ ಚೆಂದ. ನೋಡಿದಾಕ್ಷಣ.. ‘ಅಬ್ಬಾ’ ಎನ್ನುವಂತೆ ಉದ್ಘಾರ ತೆಗೆಯದವರೇ ಇಲ್ಲ ಎನ್ನಬಹುದು. ಇಷ್ಟೊಂದು ರಮಣೀಯವಾಗಿರುವ ಸ್ಥಳವು ಖಾಸಗಿ ಮಾಲೀಕರಿಗೆ ಸೇರಿದೆ ಎನ್ನುವುದು ಗಮನಾರ್ಹ.ನೆರವಂಡ ಇಂದಿರಾ ಅವರಿಗೆ ಸೇರಿದ ಜಾಗದಲ್ಲಿ ಅಬ್ಬಿ ಜಲಪಾತವಿದೆ.[೩]

ಹೋಗುವ ಹಾದಿ[ಬದಲಾಯಿಸಿ]

ಸಮೀಪದ ಪಟ್ಟಣ[ಬದಲಾಯಿಸಿ]

ಮಡಿಕೇರಿ ಇಲ್ಲಿ ವಸತಿಗೃಹಗಳು, ಪೆಟ್ರೋಲ್ ಬಂಕುಗಳು ಮತ್ತಿತರ ಪ್ರಮುಖ ವ್ಯವಸ್ಥೆಗಳು ಲಭ್ಯ.

ಸಮೀಪದ ಪ್ರಮುಖ ಆಕರ್ಷಣೆಗಳು[ಬದಲಾಯಿಸಿ]

  1. ಮಡಿಕೇರಿ,
  2. ತಲಕಾವೇರಿ,
  3. ಇರುಪ್ಪು ಜಲಪಾತ,
  4. ಭಾಗಮಂಡಲ,
  5. ಬೈಲುಕುಪ್ಪೆ
  6. ರಾಜಾಸಿಟಿ
  7. ಕಾವೇರಿ ನಿಸರ್ಗಧಾಮ
  8. ಎಮ್ಮೆಮಾಡು ಧರ್ಗ ಮುಂತಾದುವು.

ಉಲ್ಲೇಖನ[ಬದಲಾಯಿಸಿ]

  1. http://kannada.nativeplanet.com/coorg/attractions/abbey-falls
  2. http://kannadigaravedike.blogspot.in/2009_10_08_archive.html
  3. http://www.prajavani.net/article/%E0%B2%85%E0%B2%AC%E0%B3%8D%E0%B2%AC%E0%B2%BF-%E0%B2%9C%E0%B2%B2%E0%B2%AA%E0%B2%BE%E0%B2%A4-%E0%B2%AE%E0%B3%82%E0%B2%B2%E0%B2%B8%E0%B3%8C%E0%B2%95%E0%B2%B0%E0%B3%8D%E0%B2%AF-%E0%B2%95%E0%B3%8A%E0%B2%B0%E0%B2%A4%E0%B3%86
  4. "ಆರ್ಕೈವ್ ನಕಲು". Archived from the original on 2015-03-29. Retrieved 2015-06-06.